ಶಿವಮೊಗ್ಗ: ಕೊರೊನಾ ಲಾಕ್‍ಡೌನ್ ಪರಿಣಾಮ ತನ್ನ ತಂದೆಗೆ ಕೆಲಸವಿಲ್ಲದೆ ಊಟಕ್ಕೂ ತೊಂದರೆ ಇದೆ. ಹೀಗಾಗಿ ದಿನಸಿ ಕಿಟ್ ಕೊಡಿಸುವಂತೆ ಶಿವಮೊಗ್ಗದ ತ್ರಿಮೂರ್ತಿನಗರದ ಐಶ್ವರ್ಯ ಎಂಬ ಬಾಲಕಿ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಫೋನ್ ಮಾಡಿ ಮನವಿ ಮಾಡಿಕೊಂಡಿದ್ದಳು.

ಸಂಕಷ್ಟದಲ್ಲಿರುವ ಕುಟುಂಬಕ್ಕೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಹಾಯ ಮಾಡುವುದಾಗಿ ಹಾಗೂ ಬಾಲಕಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವುದಾಗಿ ಸಹ ಪಾಲಿಕೆ ಸದಸ್ಯ ಭರವಸೆ ನೀಡಿದ್ದಾರೆ. ಅಲ್ಲದೆ ಪಬ್ಲಿಕ್ ಟಿವಿಯ ಕಾರ್ಯಕ್ಕೆ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.



