ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಅರಮೇರಿ ಗ್ರಾಮದಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ಅರಮೇರಿ ಗ್ರಾಮದ ನಿವಾಸಿ ನಟೇಶ್.ಪಿ.ಎಂ(47) ಹಾಗೂ ಹುಣಸೂರು ನಿವಾಸಿ ಅಪ್ಪರ್ ಬಂಧಿತ ಆರೋಪಿಗಳು. ಇದೇ ಏಪ್ರಿಲ್ 4ರಂದು ರಾತ್ರಿ ವೇಳೆ ಅರಮೇರಿ ಗ್ರಾಮದ ನಂದ ಅವರ ಮನೆಯ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ 3.67 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ್ದರು.
ಈ ಬಗ್ಗೆ ತನಿಖೆ ಕೈಗೊಂಡ ವಿರಾಜಪೇಟೆ ಪೊಲೀಸರು, ಇಬ್ಬರು ಚೋರರನ್ನು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ, 29,250 ರೂ. ನಗದು ಹಾಗೂ 8 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ವಿರಾಜಪೇಟೆ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.