ದಾವಣಗೆರೆ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಚಾಲೆ ನೀಡಿದರು. ಇಂದು ಬೆಳಗ್ಗೆ ದಾವಣಗೆರೆ ನಗರದ ಗಾಂಧಿ ನಗರದಲ್ಲಿರುವ ಚೌಡೇಶ್ವರಿ ದೇವಾಲಯದ ಬಳಿ ಉದ್ಘಾಟಿಸಿದರು.
Advertisement
ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ ಶಾಸಕರಾದ ಎಸ್.ಎ.ರವೀಂದ್ರನಾಥ ಚಾಲನೆ ನೀಡಿದರು. ಮನೆ ಕಂದಾಯ ಸ್ವೀಕೃತಿ ಕಾರ್ಯಕ್ರಮಕ್ಕೆ ಶಾಸಕರಾದ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
Advertisement
Advertisement
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ವಹಿಸಿದ್ದರು. ಜಿಲ್ಲೆಯ ಶಾಸಕರು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ಅಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಾಗೂ ಜನ ಸ್ನೇಹಿ ಅಡಳಿತ ನೀಡುವ ಉದ್ದೇಶದಿಂದ ಸದಾ ಜನರ ಸೇವೆಯಲ್ಲಿ ಮಹಾನಗರ ಪಾಲಿಕೆ ಅಡಳಿತ ಎಂಬುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶ ಆಗಿದೆ.
Advertisement