ಹಾವೇರಿ: ಮನೆಯ ಬೀಗ ಮುರಿದು ಮೂರು ಲಕ್ಷ ರುಪಾಯಿ ಮೌಲ್ಯದ ಬಂಗಾರ ಹಾಗೂ ನಗದು ದೋಚಿಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ನಡೆದಿದೆ.
ಸವಣೂರು ಪಟ್ಟಣದ ಎಸ್‍ಎಮ್ ಕೃಷ್ಣ ನಗರದಲ್ಲಿರುವ ಹಣ್ಣಿನ ವ್ಯಾಪಾರಿಯಾಗಿರುವ ಅಸ್ಲಂ ರಶೀಧಖಾನ ಪಠಾಣ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ, ಮನೆಯ ಮುಂದಿನ ಬಾಗಿಲಿನ ಲಾಕ್ ಮುರಿದು ಕಳ್ಳರು ಮನೆಯೊಳಗೆ ನುಗ್ಗಿದ್ದಾರೆ. ಬೆಡ್ ರೂಮ್‍ನ ಕಪಾಟುಗಳ ಬೀಗವನ್ನು ಮುರಿದು ಅದರಲ್ಲಿದ್ದ ಎರಡೂವರೆ ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಒಂದೂವರೆ ಲಕ್ಷ ನಗದು ಹಣ ದೋಚಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸವಣೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರಿಗಾಗಿ ಪೊಲೀಸರು ಬಲೆಬಿಸಿದ್ದಾರೆ.