ನವದೆಹಲಿ: ಬೆಳಗಿನ ಜಾವ ಸುಮಾರು 3.20ಕ್ಕೆ ಬಸ್ ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಉತ್ತರ ಪ್ರದೇಶದ ರಸ್ತೆಯಲ್ಲಿರುವ ನ್ಯೂ ಫ್ರೆಂಡ್ಸ್ ಕಾಲೋನಿ ಬಳಿ ಬಸ್ ಮರಕ್ಕೆ ಡಿಕ್ಕಿಯಾಗಿದೆ.
ಬಸ್ ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತ ಆಗುತ್ತಿದ್ದಂತೆ ಜನರ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ನ್ಯೂ ಫ್ರೆಂಡ್ಸ್ ಕಾಲೋನಿಯ ಜನರು, ಗಾಯಾಳುಗಳನ್ನ ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ತದನಂತರ ಅಂಬುಲೆನ್ಸ್ ಮತ್ತು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
Delhi: 12 people were injured after a UP Roadways bus crashed into a tree at New Friends Colony, last night. All injured were shifted to AIIMS Trauma Centre pic.twitter.com/XTpM20npS0
— ANI (@ANI) November 21, 2020
ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಆಗ್ರಾದಿಂದ ಐಎಸ್‍ಬಿಟಿ ಸರೈ ಕಲೇ ಖಾನ್ ಮಾರ್ಗವಾಗಿ ತೆರಳುತ್ತಿತ್ತು. ಬಸ್ ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.