ಮುಂಬೈ: ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ವ್ಯಕ್ತಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗುಡುಸಿಲಿನಲ್ಲಿ ಅಮ್ಮನೊಂದಿಗೆ ಮಲಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ನಡೆದಿತ್ತು. ಈಗ ಆತನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಆರೋಪಿ ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದನು. ಬಳಿಕ ಮಗು ಕಾಣದೆ ಇರುವುದನ್ನು ಗಮನಿಸಿದ ತಾಯಿ ಮಗುವನ್ನು ಹುಡುಕಲು ಪ್ರಾರಂಭಿಸಿದ್ದಾಳೆ. ಆಗ ಹೊಲದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ಬಾಲಕಿಯನ್ನು ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಲಸಾರಿ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಅಜಯ್ ವಾಸವೆ ತಿಳಿಸಿದ್ದಾರೆ.
ಆಸ್ವಾನ ದಳದ ನೆರವು ಪಡೆದು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಆರೋಪಿ ವ್ಯಕ್ತಿಯ ಚಪ್ಪಲಿ ಗುರುತಿನ ಆಧಾರದ ಮೇಲೆ 38 ವರ್ಷದ ವ್ಯಕ್ತಿಯೊಬ್ಬನನ್ನು ಕಾರ್ಖಾನೆಯೊಂದರಲ್ಲಿ ಬಂಧಿಸಲಾಗಿದೆ. ಅಪಹರಣ ಮತ್ತು ಪೋಕ್ಸೋ (ಲೈಂಗಿಕ ದೌರ್ಜನ್ಯ ಮತ್ತು ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತಾಗಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.