ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ (Jog Falls) ಜೀವಕಳೆ ಪಡೆದುಕೊಂಡಿದೆ.
ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ (Shivamogga) ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲು
ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ.
