ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ.
ಹೌದು. ರಾಜ್ಯಸಭೆ ಆಯ್ಕೆ ಬಳಿಕ ಇದೀಗ ಹೈಕಮಾಂಡ್ ಮತ್ತೊಂದು ಗಿಫ್ಟ್ ನೀಡಿದ್ದು, ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದೆ. ಈ ಸಂಬಂಧ ರಾಜ್ಯಸಭೆ ಸಭಾಧ್ಯಕ್ಷರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ವೆಂಕಯ್ಯ ನಾಯ್ಡು ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.
Advertisement
Advertisement
ವಿಪಕ್ಷ ನಾಯಕರಾಗಿದ್ದ ಗುಲಾಂನಬೀ ಆಜಾದ್ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಜವಾಬ್ದಾರಿ ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಮಲ್ಲಿಕಾರ್ಜುನ ಖರ್ಗೆಗೆ ಈ ಮೂಲಕ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ