ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಇನ್ನೂ ಯಾರಿಗೆ ಆಗಿಲ್ಲವೋ ಅಂಥವರ ಹೆಸರುಗಳ ಪಟ್ಟಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಮನವಿ ಮಾಡಿದ್ದಾರೆ.
Advertisement
ಈ ಕುರಿತು ಕ್ಷೇತ್ರ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಅವರು ಪತ್ರ ಬರೆದಿದ್ದಾರೆ. ಕೋವಿಡ್ ಲಸಿಕೆಯ ಒಂದನೇ ಡೋಸ್ ಹಾಕಿಸಿಕೊಳ್ಳಬೇಕಾಗಿರುವವರ 18 ವರ್ಷವಾದವರ ಪಟ್ಟಿಯನ್ನು ತಮ್ಮ ಕ್ಷೇತ್ರ ಕಚೇರಿಗೆ ಸಲ್ಲಿಸಲು ಅಥವಾ +91 80 23563944 ಸಂಖ್ಯೆಯನ್ನು ಬೆಳಿಗ್ಗೆ 9ರಿಂದ- ಸಂಜೆ 5ರೊಳಗೆ ಸಂಪರ್ಕಿಸಿ ಮಾಹಿತಿ ಕೊಡಲು ಕೋರಿದ್ದಾರೆ.
Advertisement
Advertisement
ಮೇ ತಿಂಗಳಿಂದ ಇಲ್ಲಿಯವರೆಗೆ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ 81 ಲಸಿಕಾ ಶಿಬಿರಗಳನ್ನು ನಡೆಸಲಾಗಿದ್ದು, 18ರಿಂದ 45 ವಯೋಮಾನದೊಳಗಿನ 40,043 ನಾಗರಿಕರು ಪ್ರಯೋಜನ ಪಡೆದಿದ್ದಾರೆ. 45 ವರ್ಷವಾದವರನ್ನು ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಲು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Advertisement
ಮಲ್ಲೇಶ್ವರಂ ಕ್ಷೇತ್ರವು 18 ವರ್ಷ ಮೇಲ್ಪಟ್ಟವರಿಗೆ ಶೇ 100ರಷ್ಟು ಲಸಿಕೆ ಪೂರೈಸಿದ ಮೊದಲ ಕ್ಷೇತ್ರವಾಗಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ, ಲಸಿಕಾ ವ್ಯಾಪ್ತಿಗೆ ಎಲ್ಲರನ್ನೂ ಒಳಪಡಿಸಲು ಅಗತ್ಯ ಸಹಕಾರ ನೀಡಬೇಕು. ಈ ಸಂಬಂಧ ಯಾವುದೇ ಮಾಹಿತಿಯನ್ನು [email protected] ಗೆ ಇ-ಮೇಲ್ ಕೂಡ ಮಾಡಬಹುದು ಎಂದು ತಿಳಿಸಿದ್ದಾರೆ.
I seek your wholehearted support to make Malleshwara the first constituency to vaccinate 100% of its citizens above 18 yrs.
I urge all Apartment Associations, Linguistic Forums, Religious Associations & NGOs in Malleshwara to provide list of those yet to take a single dose. pic.twitter.com/eVaZM6SgsD
— Dr. Ashwathnarayan C. N. (@drashwathcn) July 1, 2021