ಬಳ್ಳಾರಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಕಾರಣ ಅವಾಂತರ ಸೃಷ್ಟಿಯಾಗುತ್ತಿವೆ. ಅಲ್ಲದೇ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಬಳ್ಳಾರಿ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ, ಬೊಮ್ಮನಹಳ್ಳಿ ಸೇರಿದಂತೆ ಜಿಲ್ಲೆಯ ನಾನಾ ಭಾಗದಲ್ಲಿ ಅಪಾರ ಪ್ರಮಾಣದ ಮಳೆಯಾಗಿದೆ. ಕೆಲ ಕಡೆಗಳಲ್ಲಿ ಹಳ್ಳಗಳು ತುಂಬಿ ಹರಿದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಷ್ಟೇ ಅಲ್ಲದೇ ಈಗಷ್ಟೆ ಬಿತ್ತಿದ್ದ ಬೆಳೆಗಳು ಮಳೆಗೆ ಕೊಚ್ಚಿ ಹೋಗಿವೆ.
Advertisement
Advertisement
ಶ್ರೀಕಂಠಾಪುರ ತಾಂಡದಲ್ಲೂ ಭಾರೀ ಮಳೆಯಾಗಿದ್ದು, ಹಳ್ಳ ದಿನ್ನೆಗಳು ಉಕ್ಕಿ ಹರಿದಿವೆ. ಇತ್ತ ಮಳೆ ನೀರಿನ ರಭಸಕ್ಕೆ ಜಮೀನಿನಲ್ಲಿ ಟ್ರಾಕ್ಟರ್ ಇಂಜಿನ್ ಸಹ ಕೊಚ್ಚಿಕೊಂಡು ಹೋಗಿದೆ. ರೈತ ವೆಂಕಟೇಶ್ ಸೇರಿದ ಟ್ರಾಕ್ಟರ್ ಇಂಜಿನ್ ಕೊಚ್ಚಿಕೊಂಡು ಹೋಗಿದ್ದು, ಟ್ರಾಲಿ ಮಾತ್ರ ಉಳಿದುಕೊಂಡಿದೆ.
Advertisement
ಸರ್ಕಾರ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ವೀಕ್ಷಣೆ ಮಾಡಿ, ನಷ್ಟ ಪರಿಹಾರ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.