ಕೋಲಾರ: ರಾಜ್ಯದ ಬಹುತೇಕ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಭಾರೀ ಅನಾಹುತಗಳನ್ನು ಸೃಷ್ಟಿಸುತ್ತಿದ್ದು, ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಾಲಕ ಸಾವನ್ನಪ್ಪಿದ್ದಾನೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕ ಹರೀಶ್ (13) ಮೃತಪಟ್ಟಿದ್ದಾನೆ. ರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಗೋಡೆ ತೇವಗೊಂಡಿದ್ದು, ಇದರಿಂದಾಗಿ ಒಮ್ಮೆಲೆ ಕುಸಿದು ಬಿದ್ದಿದೆ. ಮನೆಯಲ್ಲೇ ಮಲಗಿದ್ದ ಬಾಲಕನ ಮೇಲೆ ಗೋಡೆ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ. ಬಾಲಕನ ತಾಯಿ ಆನಂದಮ್ಮಗೂ ತೀವ್ರ ಗಾಯಗಳಾಗಿವೆ.
ಇಟ್ಟಿಗೆಯ ಹಳೆಯ ಗೋಡೆಯಾಗಿದ್ದರಿಂದ ತೇವಗೊಂಡು ಕುಸಿದು ಬಿದ್ದಿದೆ. ಮಲಗಿದ್ದಾಗ ಬಿದ್ದಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿರುವ ಆನಂದಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.