ಬೆಂಗಳೂರು: ಮಳೆ, ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಮೊತ್ತಕ್ಕೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ.
Advertisement
ಶೇ.75 ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ತಿಳಿಸಿದೆ. ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳನ್ನು ಕೆಡವಿ ಕಟ್ಟಲು 5 ಲಕ್ಷ ರೂ. ಪರಿಹಾರ, ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ 3 ಲಕ್ಷ ರೂ. ಪರಿಹಾರದ ಮೊತ್ತವನ್ನು ನಿಗದಿ ಮಾಡಿದೆ.
Advertisement
ಶೇ.15-35 ರಷ್ಟು ಅಲ್ಪ ಹಾನಿಯಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಹಾಗೂ ಬಟ್ಟೆ, ದಿನಬಳಕೆ ವಸ್ತುಗಳ ಹಾನಿಗೆ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ಪರಿಹಾರ ಸಿಗಲಿದೆ.
Advertisement
Advertisement
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಬಳ್ಳಾರಿಗೆ ತೆರಳಿದ್ದಾರೆ, ಸಿಎಂ ಜೊತಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ತೆರಳಿದ್ದಾರೆ. ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿ ಬಳ್ಳಾರಿಯ ಜಿಂದಾಲ್ ಏರ್ ಸ್ಟ್ರಿಪ್ ನಿಂದ 10.15ಕ್ಕೆ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.