ಧಾರವಾಡ: ಮಹದಾಯಿ ನದಿ ನೀರು ವಿಷಯದಲ್ಲಿ ಕಾಂಗ್ರೆಸ್ ಇಬ್ಬಗೆ ಧೋರಣೆ ತೋರಿಸುತ್ತಿದ್ದು, ಮಾಜಿ ಸಚಿವ ದಿನೇಶ್ ಗುಂಡೂರಾವ್ ಜನತೆ ಬಳಿ ಕ್ಷಮೆ ಕೇಳಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶೆಟ್ಟರ್, ಈ ಕೂಡಲೇ ದಿನೇಶ್ ಗುಂಡೂರಾವ್ ರಾಜ್ಯದ ಜನರ ಕ್ಷಮೆ ಕೇಳಬೇಕು. ದಿನೇಶ್ ಗುಂಡೂರಾವ್ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಮಾತನಾಡಬೇಕು ಎಂದು ಹೇಳಿದರು. ಮಹದಾಯಿ ಬಗ್ಗೆ ಎಚ್.ಕೆ. ಪಾಟೀಲರು ಬಹಳ ಮಾತನಾಡುತ್ತಾರೆ. ಈಗ ಅವರದೇ ಪಕ್ಷದ ದಿನೇಶ್ ಗುಂಡೂರಾವ್ ಬಗ್ಗೆ ಪಾಟೀಲರು ಏನು ಹೇಳ್ತಾರೆ ಎಂದು ಪ್ರಶ್ನಿಸಿದರು.
Advertisement
Advertisement
ಬಿಜೆಪಿ ಮತ್ತು ಕಾಂಗ್ರೆಸ್ ಮಹದಾಯಿ ವಿಷಯದಲ್ಲಿ ಒಂದಾಗಿ ಕೆಲಸ ಮಾಡಬೇಕಿದೆ. ಆಗ ಐದೇ ನಿಮಿಷದಲ್ಲಿ ವಿವಾದ ಬಗೆ ಹರಿಯುತ್ತದೆ. ಆದರೆ ಕರ್ನಾಟಕ ಕಾಂಗ್ರೆಸ್ ಗೋವಾ ಕಾಂಗ್ರೆಸ್ ಗೆ ಛೂ ಬಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
Advertisement
Advertisement
ಗುಂಡೂರಾವ್ ಹೇಳಿದ್ದೇನು?: ಮಹದಾಯಿ ವಿಚಾರದಲ್ಲಿ ಗೋವಾ ಕಾಂಗ್ರೆಸ್ ಘಟಕ ತೆಗೆದುಕೊಳ್ಳುವ ನಿರ್ಧಾರವನ್ನು ಬೆಂಬಲಿಸೋದಾಗಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂದು ಗೋವಾ ವಿರೋಧ ಪಕ್ಷದ ನಾಯಕ ಹೇಳಿರುವ ಬಗ್ಗೆ ವರದಿಯಾಗಿದೆ. ದಿನೇಶ್ ಗುಂಡೂರಾವ್ ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ.