ಮುಂಬೈ: ಮಹಾರಾಷ್ಟ್ರದ ಪುಣೆಯ 50 ವರ್ಷದ ಮಹಿಳೆ ಜಿಕಾ ವೈರಸ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಹಿಳೆ ಪುಣೆ ಜಿಲ್ಲೆಯ ಪುರಂದರ ತೆಹ್‍ಸಿಲ್ ನ ಬೆಲಸರ್ ನಿವಾಸಿಯಾಗಿದ್ದಾರೆ. ಇದು ಮಹಾರಾಷ್ಟ್ರದಲ್ಲಿ ಕಂಡು ಬಂದ ಮೊದಲ ಜಿಕಾ ವೈರಸ್ ಪ್ರಕರಣ ಎಂದು ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.
ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಕುಟುಂಬಸ್ಥರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಅನಾರೋಗ್ಯ ಹಿನ್ನೆಲೆ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿನ ಜಿಕಾ ವೈರಸ್ ಸೋಂಕು ತಗುಲಿರೋದು ತಿಳಿದು ಬಂದಿದೆ.
Advertisement
Advertisement
ಇನ್ನೂ ಮಹಿಳೆ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯುತ್ತಲೇ ಆರೋಗ್ಯಾಧಿಕಾರಿಗಳು ಬೆಲಸರ್ ಗ್ರಾಮಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ, ಗ್ರಾಮಸ್ಥರು ಆರೋಗ್ಯದ ಮಾಹಿತಿ ಕಲೆಹಾಕುತ್ತಿದ್ದಾರೆ. ಗ್ರಾಮದ ಮುಖಂಡರ ಜೊತೆ ಮಾತುಕತೆ ನಡೆಸಿ, ಎಲ್ಲರೂ ಎಚ್ಚರಿಕೆಯಿಂದಿರಬೇಕು. ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಆರೋಗ್ಯಾಧಿಕಾರಿಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಜಿಕಾ ವೈರಸ್ ಲಸಿಕೆಗೆ ಪೇಟೆಂಟ್ ಸಿಕ್ಕಿದ ವಿಶ್ವದ ಮೊದಲ ಕಂಪನಿ ನಮ್ಮದು – ಭಾರತ್ ಬಯೋಟೆಕ್