ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ನಿಯಮ ಮೀರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಸೂಚನೆಯನ್ನು ನೀಡಿದೆ.
ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಇಂದಿನಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆಯನ್ನು ನೀಡಲಾಗಿದೆ.
Advertisement
Advertisement
ಭಾರತದಲ್ಲಿ ಶನಿವಾರ 62,714 ಹೊಸ ಕೊರೊನವೈರಸ್ ಸೋಂಕಿನ ಪ್ರಕರಣಗಳನ್ನು ವರದಿ ಆಗಿವೆ. ಭಾರತವು ಶನಿವಾರ ದಾಖಲಿಸಿದ ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲಿ ಮಾತ್ರ 35,726 ಹೊಸ ಪ್ರಕರಣಗಳು ದಾಖಲಾಗಿವೆ. 3,162 ಪ್ರಕರಣ, ಛತ್ತೀಸ್‍ಗಢದಲ್ಲಿ ಪಂಜಾಬ್‍ಗಿಂತ ಹೆಚ್ಚಿನ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 4.86 ಲಕ್ಷಕ್ಕಿಂತ ಹೆಚ್ಚಾಗಿದೆ. ಶನಿವಾರ 312 ಜನರು ವೈರಸ್‍ಗೆ ತುತ್ತಾಗಿದ್ದಾರೆ.
Advertisement
ಕೊವೀಡ್-19 ಕಾರಣದಿಂದಾಗಿ ಮಹಾರಾಷ್ಟ್ರದಲ್ಲಿ ಶನಿವಾರ 166 ಸಾವನ್ನಪ್ಪಿದ್ದಾರೆ. ಇದು 2020 ರ ಅಕ್ಟೋಬರ್ ನಿಂದೀಚೆಗೆ ರಾಜ್ಯದಲ್ಲಿ 35,726 ಹೊಸ ಕೊರೊನ ವೈರಸ್ ಪ್ರಕರಣಗಳು ವರದಿಯಾಗಿವೆ. ಮಾರ್ಚ್ 27 ರಿಂದ ಧಾರ್ಮಿಕ ಮತ್ತು ರಾಜಕೀಯ ಸೇರಿದಂತೆ ರಾಜ್ಯದಲ್ಲಿ ಎಲ್ಲಾ ರೀತಿಯ ಸಾಮಾಜಿಕ ಕೂಟಗಳನ್ನು ಮಹಾರಾಷ್ಟ್ರ ಸರ್ಕಾರ ನಿಷೇಧಿಸಿದೆ. ಮಾಲ್‍ಗಳು, ರೆಸ್ಟೋರೆಂಟ್‍ಗಳು ಮತ್ತು ಉದ್ಯಾನಗಳು ರಾಜ್ಯದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7 ರವರೆಗೆ ಮುಚ್ಚಲ್ಪಡುತ್ತವೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ಆದರೆ, ರಾತ್ರಿ ವೇಳೆಯಲ್ಲಿ ಆಹಾರವನ್ನು ಹೋಮ್ ಡೆಲವರಿ ಮಾಡುವುದಕ್ಕೆ ಮಾತ್ರ ವಿನಾಯಿತಿ ನೀಡಿದೆ.
Advertisement
ಕೋವಿಡ್-19 ಹರಡುವಿಕೆ ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಕೊರೊನಾ ತಡೆ ಅಭಿಯಾನವನ್ನು ಮತ್ತೆ ಪ್ರಾರಂಭಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸರ್ಕಾರದ ಈ ನಿಯಮಗಳನ್ನು ಯಾರಾದರೂ ಮೀರಿದರೆ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಮಾರ್ಗ ಸೂಚಿಗಳು:
* ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆಯನ್ನು ನಿಷೇಧಿಸಲಾಗಿದೆ
* ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳದಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಬಳಸಲೇಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
* ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸಲಾಗುತ್ತದೆ ಹಾಗೂ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ವಿಧಿಸಲಾಗುತ್ತದೆ.
* ಎಲ್ಲಾ ಖಾಸಗಿ ಕಚೇರಿಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದಲ್ಲಿ ನೌಕರರಿಂದ ಕಾರ್ಯನಿರ್ವಹಿಸಬೇಕು. ಉಳಿದಂತೆ ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡಬೇಕು.
* ಕೊರೊನಾ ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ದಂಡ ವಿಧಿಸಬಹುದಾಗಿದೆ.