– ಅನಗತ್ಯ ಸಂಚಾರ ಬಂದ್
– ನಾಳೆ ರಾತ್ರಿಯಿಂದ ಏಪ್ರಿಲ್ 30ರವೆಗೆ ಕರ್ಫ್ಯೂ
ಮುಂಬೈ: ಕೊರೊನಾ ನಿಯಂತ್ರಣ ಸಂಬಂಧ ಮಹಾರಾಷ್ಟ್ರದ ರಾಜ್ಯಾದ್ಯಂತ 15 ದಿನಗಳ ಕಾಲ ಜನತಾ ಕರ್ಫ್ಯೂವನ್ನು ಸಿಎಂ ಉದ್ದವ್ ಠಾಕ್ರೆ ಘೋಷಿಸಿದ್ದಾರೆ.
ರಾತ್ರಿ 8:30ಕ್ಕೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ರಾತ್ರಿ 8 ಗಂಟೆಯಿಂದ ಏಪ್ರಿಲ್ 30ರವರೆಗೆ ಜನತಾ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ 144 ಸೆಕ್ಷನ್ ಜಾರಿಯಾಗಲಿದೆ. ಇದು ಲಾಕ್‍ಡೌನ್ ಅಲ್ಲ. ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಭಾರೀ ಸಂಖ್ಯೆಯಲ್ಲಿ ಜನರು ಸೇರುವುದಕ್ಕೆ ನಿರ್ಬಂಧ ಹೇರಲಾಗಿದ್ದು, 4ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಜನರು ಈ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Advertisement
Advertisement
ತುರ್ತು ಸಂದರ್ಭ ಹೊರತು ಪಡಿಸಿ ಅನಗತ್ಯ ಪ್ರಯಾಣವನ್ನು ಕೈಗೊಳ್ಳುವಂತಿಲ್ಲ. ಅಗತ್ಯ ವಸ್ತುಗಳ ಅಂಗಡಿ, ಮೆಡಿಕಲ್, ಬ್ಯಾಂಕು, ಮಾಧ್ಯಮ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಅಗತ್ಯ ಸೇವೆಗಳು ಲಭ್ಯವಿರುತ್ತದೆ. ರಾತ್ರಿ 8ರ ಬಳಿಕ ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.
Advertisement
ಸ್ಥಳೀಯ ರೈಲುಗಳು ಮತ್ತು ಬಸ್ ಸೇವೆಗಳು ಅಗತ್ಯ ಸೇವೆಗಳಿಗೆ ಮಾತ್ರ ಲಭ್ಯವಿರುತ್ತದೆ. ನಿರ್ಮಾಣ ಕಾಮಗಾರಿ ಕೆಲಸಗಳಿಗೆ ಅನುಮತಿ ನೀಡಲಾಗುತ್ತದೆ. ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳು ತೆರೆಯುವಂತಿಲ್ಲ. ಹೋಮ್ ಡೆಲಿವರಿಗೆ ಅನುಮತಿ ನೀಡಲಾಗಿದೆ.
Advertisement
मुख्यमंत्री उद्धव बाळासाहेब ठाकरे यांचा जनतेशी संवाद – LIVE https://t.co/8lHPzi4Jpn
— CMO Maharashtra (@CMOMaharashtra) April 13, 2021