ಬೆಂಗಳೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದ್ರೆ ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಕೃಷ್ಣೆಯಲ್ಲಿ ಅಬ್ಬರ ಮಾತ್ರ ಕಡಿಮೆ ಆಗಿಲ್ಲ. ದೂದ್‍ಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಮಾತ್ರ ಸ್ವಲ್ಪ ಶಾಂತಗೊಂಡಿವೆ. ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ನೀರಾವರಿ ಅಧಿಕಾರಿಗಳು ಮನವಿ ಮಾಡ್ಕೊಂಡಿದ್ದಾರೆ.
ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಮುಳುಗಡೆಯಾಗಿವೆ ಇವೆ. ಇಲ್ಲಿ ನೀರಿನ ಮಟ್ಟ ಕಡಿಮೆ ಆಗಿಲ್ಲ. ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಬೆಳಗಾವಿಯ ರಾಕಸಕೊಪ್ಪ ಜಲಾಶಯ ಭರ್ತಿ ಆಗಿದೆ. ಜಲಾಶಯದ 2 ಗೇಟ್‍ಗಳ ಮೂಲಕ ಮಾರ್ಕಂಡೇಯ ನದಿಗೆ ನೀರು ಬಿಡಲಾಗಿದೆ. ಇದರಿಂದ ಮಾರ್ಕಂಡೇಯ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಜನರಿಗೆ ಆತಂಕ ಹೆಚ್ಚಾಗಿದೆ.
Advertisement
Advertisement
ಧಾರವಾಡದ ತುಪ್ರಿಹಳ್ಳದಲ್ಲಿ ಪ್ರವಾಹ ಇಳಿದಿದ್ದು, ಧಾರವಾಡ – ಸವದತ್ತಿ ರಸ್ತೆ ಸಂಚಾರ ಆರಂಭವಾಗಿದೆ. ಹಾವೇರಿಯಲ್ಲಿ ವರದಾ ನದಿಯಲ್ಲಿ ಸಿಲುಕಿದ್ದ ಎಮ್ಮೆಗಳಿಗಾಗಿ ನದಿಗೆ ಹಾರಿದ್ದ ಯುವಕ ನೀರು ಪಾಲಾಗಿದ್ದಾನೆ. ಹಿರಣ್ಯಕೇಶಿ, ಮಾರ್ಕಂಡೇಯ ಡ್ಯಾಂಗಳಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರೀತಿದೆ.
Advertisement
Advertisement
ಮುಧೋಳ ತಾಲೂಕಿನ ಚಿಚಕಂಡಿ ಬ್ಯಾರೇಜ್ ಬಳಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಕಬ್ಬು, ಸೂರ್ಯಕಾಂತಿ, ಹೆಸರು ಬೆಳೆಗಳು ನೀರಲ್ಲಿ ನಿಂತು ಲಕ್ಷಾಂತರ ರೂಪಾಯಿ ಹಾನಿ ಆಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ರಾಯಚೂರಿನಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ದೇವದುರ್ಗದ ಹೂವಿನಹೆಡಗಿ ಸೇತುವೆ ಮುಳುಗಡೆ ಹಂತದಲ್ಲಿದೆ.