ಮುಂಬೈ: ಕೊರೊನಾ ಸೋಂಕು ಸಾಂಕ್ರಾಮಿಕದಿಂದಾಗಿ ಲಾಕ್‍ಡೌನ್‍ಗೆ ತುತ್ತಾಗಿ ಹೈರಾಣಾಗಿದ್ದ ಭಾರತದಲ್ಲಿ ಇದೀಗ ಮತ್ತೆ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.
ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಹೇರಲಾಗಿದೆ. ಇಂದು ಸಂಜೆಯಿಂದಲೇ ಲಾಕ್‍ಡೌನ್ ನಿಯಮ ಜಾರಿಗೆ ಬರಲಿದ್ದು, ಮುಂದಿನ ಏಳು ದಿನ ಲಾಕ್‍ಡೌನ್ ಜಾರಿಯಲ್ಲಿರಲಿದೆ. ಈ ವೇಳೆ ಕೇವಲ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.
Advertisement
Advertisement
ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಮತ್ತೆ ದಿಢೀರ್ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಅಮರಾವತಿಯಲ್ಲಿ ಇಂದು ಸಂಜೆಯಿಂದಲೇ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಪುಣೆಯಲ್ಲಿ ನೈಟ್ ಕಫ್ರ್ಯೂ ಜಾರಿಯಾಗಿದ್ದು, ಫೆ. 28ರವರೆಗೆ ಶಾಲೆಗಳು ಬಂದ್ ಇರಲಿವೆ. ಮಹಾರಾಷ್ಟ್ರದಲ್ಲಿ ಇಂದಿನಿಂದ ಸಾರ್ವಜನಿಕ ಸಭೆ, ಸಮಾರಂಭ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.
Advertisement
Advertisement
ಈ ಹಿಂದೆಯೇ ಅಮರಾವತಿಯಲ್ಲಿ ವಾರಾಂತ್ಯದಲ್ಲಿ ಲಾಕ್‍ಡೌನ್ ಅನ್ನು ಜಿಲ್ಲಾಡಳಿತ ಘೋಷಿಸಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ ಆರಂಭಗೊಂಡು ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಲಾಕ್ ಡೌನ್ ಜಾರಿಗೆ ತಂದಿತ್ತು. ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇದೀಗ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
3 ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ದಿನನಿತ್ಯ 6 ಸಾವಿರಕ್ಕೂ ಅಧಿಕ ಕೇಸ್‍ಗಳು ಪತ್ತೆಯಾಗಿವೆ. ಒಂದು ವೇಳೆ 8-15 ದಿನದಲ್ಲಿ ಕೊರೊನಾ ಕೇಸ್ ಹೆಚ್ಚಳವಾದ್ರೆ ಲಾಕ್‍ಡೌನ್ ಆಗುತ್ತದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ಆರ್‍ಟಿಸಿಪಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.