ರಾಯಚೂರು: ಡೆಲ್ಟಾ ಆತಂಕ ಹಿನ್ನೆಲೆಯಲ್ಲಿ ನಗರದ ರೈಲ್ವೇ ನಿಲ್ದಾಣದಲ್ಲಿ ಅಧಿಕಾರಿಗಳು ಕೊರೊನಾ ತಪಾಸಣೆಗೆ ಮುಂದಾಗಿದ್ದಾರೆ.
Advertisement
ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಪ್ರಯಾಣಿಕರ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಆದೇಶಕ್ಕೆ ಕೊನೆಗೂ ಎಚ್ಚೆತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡುತ್ತಿದ್ದಾರೆ.
Advertisement
Advertisement
72 ಗಂಟೆಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ತಪಾಸಣೆಯಿಂದ ವಿನಾಯಿತಿಯಿದೆ. ನೆಗೆಟಿವ್ ವರದಿ ಇರದ ಎಲ್ಲಾ ಪ್ರಯಾಣಿಕರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಮುಗಿಬಿದ್ದು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಮಹಾರಾಷ್ಟದಿಂದ ಬರುವ ರೈಲ್ವೆ ಪ್ರಯಾಣಿಕರನ್ನ ಮಾತ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆರ್‌ಟಿಪಿಸಿಆರ್ ನೆಗೆಟಿವ್ ವರದಿ, 1 ಲಸಿಕೆ ಪಡೆದ ದಾಖಲೆ ಪರಿಶೀಲನೆ ಮಾಡಿ ಪ್ರಯಾಣಿಕರನ್ನ ಜಿಲ್ಲೆಯ ಒಳಗೆ ಬಿಡಲಾಗುತ್ತಿದೆ. ಇದನ್ನೂ ಓದಿ: ಫಿಲಿಪೈನ್ಸ್ ಮಿಲಿಟರಿ ವಿಮಾನ ದುರಂತ – 29 ಜನ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
Advertisement