ಮುಂಬೈ: ಮಹಾರಾಷ್ಟ್ರದ (Maharashtra) ಶಾಲೆಯೊಂದರಲ್ಲಿ ಪ್ರಾಂಶುಪಾಲನೊಬ್ಬ ಬಲವಂತವಾಗಿ ಬಾಲಕಿಯರ ಋತುಚಕ್ರ (Periods) ಪರೀಕ್ಷಿಸಿದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
5-10ನೇ ತರಗತಿ ವಿದ್ಯಾರ್ಥಿನಿಯರು ಸಂಸ್ಥೆಯ ಸ್ನಾನ ಗೃಹದಲ್ಲಿ ರಕ್ತದ ಕಲೆಗಳು ಕಂಡು ಬಂದ ನಂತರ ಪ್ರಾಂಶುಪಾಲ (School Principal) ಮತ್ತು ಸಿಬ್ಬಂದಿ ಮುಟ್ಟಾಗುತ್ತಿದೆಯೇ ಎಂದು ಪರೀಕ್ಷಿಸಲು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾರೆ ಎಂದು ವರದಿಯಾಗಿದೆ. ಘಟನೆ ತಿಳಿದು ಪ್ರಾಂಶುಪಾಲ ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್
ಶಾಲಾ ಸಭಾಂಗಣಕ್ಕೆ ವಿದ್ಯಾರ್ಥಿನಿಯರನ್ನ ಕರೆದ ಪ್ರಾಂಶುಪಾಲರು ನೆಲದ ಮೇಲೆ ಕಂಡು ಬಂದ ರಕ್ತದ ಕಲೆಗಳನ್ನ ಚಿತ್ರಗಳನ್ನ ತೋರಿಸಿದ್ದಾರೆ. ನಂತರ ವಿದ್ಯಾರ್ಥಿಯರನ್ನ ಮುಟ್ಟಾಗುತ್ತಿರುವವರು ಮತ್ತು ಮುಟ್ಟಾಗದಿರುವವರು ಪ್ರತ್ಯೇಕ ಸಾಲಿನಲ್ಲಿ ನಿಲ್ಲುವಂತೆ ಸೂಚಿಸಿದ್ದಾರೆ. ಈ ವೇಳೆ 10 ರಿಂದ 12 ವರ್ಷ ವಯಸ್ಸಿನ ಕೆಲ ಹುಡುಗಿಯರನ್ನ ಒಬ್ಬೊಬ್ಬರಾಗಿ ಪರೀಕ್ಷಿಸುವಂತೆ ಮಹಿಳಾ ಸಿಬ್ಬಂದಿಗೆ ಹೇಳಿದ್ದಾರೆ. ಆದ್ರೆ ಅವರು ಮುಟ್ಟಾಗಿರಲಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್
ತಪಾಸಣೆಯ ಸಮಯದಲ್ಲಿ ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ಒಳಉಡುಪುಗಳನ್ನ ಮುಟ್ಟಿದ್ದಾರೆ. ಈ ವೇಳೆ ಸ್ಯಾನಿಟರಿ ನ್ಯಾಪ್ಕಿನ್ ಬಳಸುತ್ತಿದ್ದ ಓರ್ವ ವಿದ್ಯಾರ್ಥಿನಿಯನ್ನ ಕಂಡುಕೊಂಡಿದ್ದಾರೆ. ಆದ್ರೆ ಆಕೆ ಮುಟ್ಟಾದ ವಿದ್ಯಾರ್ಥಿನಿಯರ ಸಾಲಿನಲ್ಲಿ ನಿಂತಿದ್ದಳು. ಬಳಿಕ ತಮ್ಮ ಮಕ್ಕಳಿಂದ ವಿಷಯ ತಿಳಿದ ಪೋಷಕರು ಶಾಲೆಗ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಬುಧವಾರ ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಯುವಕ ಅರೆಸ್ಟ್
ಶಾಲಾ ಪ್ರಾಂಶುಪಾಲರು, ಒಬ್ಬ ಸಿಬ್ಬಂದಿ, ಇಬ್ಬರು ಶಿಕ್ಷಕರು ಮತ್ತು ಇಬ್ಬರು ಟ್ರಸ್ಟಿಗಳು ಸೇರಿದಂತೆ 6 ಜನರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಇಬ್ಬರನ್ನೂ ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ನಡೆಸಲಾಗಿದೆ ಎಂದು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.