ಬೆಂಗಳೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಸಂಬಂಧ ರಾಜಕೀಯ ನಾಯಕರು ವಿವಿಧ ಹೇಳಿಕೆಗಳನ್ನು ನೀಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಸಾಲಿಗೆ ಇದೀಗ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕೂಡ ಸೇರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು ಮಹಿಳೆಯರಿಗೆ ಬಂದೂಕು ಪರವಾನಗಿ ಕೊಡಬೇಕು ಎಂದು ಹೇಳಿದ್ದಾರೆ. ಆನಂದ್ ಸಿಂಗ್ ಅವರ ಈ ಅಸಂಬದ್ಧ ಮಾತಿಗೆ ಜನ ರೊಚಿಗೆದ್ದಿದ್ದಾರೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್
Advertisement
Advertisement
ಟ್ವೀಟ್ ನಲ್ಲೇನಿದೆ..?
ಗ್ಯಾಂಗ್ ರೇಪ್ ಪ್ರಕರಣ ಹೀನ ಕೃತ್ಯವಾಗಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗುವುದು ಶತಃಸಿದ್ಧ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರ ಬದ್ಧ. ಆದರೂ ಸಹ ಮಹಿಳೆ ಇಂತಹ ನೀಚಕೃತ್ಯಗಳಿಂದ, ಸ್ವಾವಲಂಬಿಯಾಗಿ ತನ್ನ ಆತ್ಮರಕ್ಷಣೆ ಮಾಡಿಕೊಳ್ಳಲು ಸರ್ಕಾರದಿಂದ ಮಹಿಳೆಯರಿಗೆ ಬಂದೂಕು ಪರವಾನಗಿ ನೀಡಿದರೆ ಉತ್ತಮ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಬರೆದುಕೊಂಡಿದ್ದಾರೆ.
Advertisement
ಗ್ಯಾಂಗ್ ರೇಪ್ ಪ್ರಕರಣ ಹೀನ ಕೃತ್ಯವಾಗಿದ್ದು,ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗುವುದು ಶತಃಸಿದ್ದ.ಇಂತಹ ಕೃತ್ಯಗಳಿಗೆಕಡಿವಾಣ ಹಾಕಲು ನಮ್ಮ ಸರ್ಕಾರ ಬದ್ದ.ಆದರೂ ಸಹ ಮಹಿಳೆ ಇಂತಹ ನೀಚಕೃತ್ಯಗಳಿಂದ,ಸ್ವಾವಲಂಬಿಯಾಗಿ ತನ್ನ ಆತ್ಮರಕ್ಷಣೆ ಮಾಡಿಕೊಳ್ಳಲು ಸರ್ಕಾರದಿಂದ ಮಹಿಳೆಯರಿಗೆ ಬಂದೂಕುಪರವಾನಗಿ ನೀಡಿದರೆ ಉತ್ತಮ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.
— Anand Singh (@AnandSinghBS) August 27, 2021
Advertisement
ನಡೆದಿದ್ದೇನು..?
ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ
ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದ ಯುವಕ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಕರಣ ಸಂಬಂಧ ಡಿಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿ, ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸುಳಿವು ಸಿಕ್ಕರೂ ಸದ್ಯ ನಾವು ಅದನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆರೋಪಿಗಳು ಪತ್ತೆಯಾದ ತಕ್ಷಣ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಪ್ರಕರಣದ ಕುರಿತು ಗಂಭೀರ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಿಂದ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂತ್ರಸ್ತೆ ಮಾನಸಿಕ ಸ್ಥಿತಿ ಸರಿ ಇಲ್ಲ. ಹುಷಾರಾದ ಬಳಿಕ ಮಾಹಿತಿ ನೀಡುವುದಾಗಿ ಸಂತ್ರಸ್ತೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ