– ಮಗುವನ್ನು ಹಿಡ್ಕೊಂಡು ಹೊಲದ ಕಡೆ ಓಡೋದ ಚಾಲಕ
ರಾಯಚೂರು: ಸಹಾಯ ಕೇಳಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ಮೇಲೆ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಬಳಿ ಘಟನೆ.
ಟಂಟಂ ವಾಹನ ಚಾಲಕ ಬಾಗಲಕೋಟೆ ಮೂಲದ ಶಂಕರಪ್ಪ ಮುಳಗುಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಾನೆ. ಮೂರು ವರ್ಷದ ಮಗುವನ್ನ ಆಸ್ಪತ್ರೆಗೆ ತೋರಿಸಲು ಲಿಂಗಸುಗೂರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ.
ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಚಾಲಕ ಓಡಿದ್ದಾನೆ. ಮಗುವನ್ನು ಆತನಿಂದ ಬಿಡಿಸಿಕೊಳ್ಳಲು ತೆರಳಿದಾಗ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ.
ರಸ್ತೆಯಲ್ಲಿ ತೆರಳುತ್ತಿದ್ದ ಜನ ಕೂಗಾಟದ ಶಬ್ದ ಕೇಳಿ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ. ತಪ್ಪಿಸಿಕೊಂಡು ಹೋಗುತ್ತಿದ್ದ ಚಾಲಕನನ್ನ ವಾಹನ ಸಮೇತ ಹಿಡಿದು ಸಾರ್ವಜನಿಕರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡ ರಾತ್ರಿ ಪ್ರಕರಣ ದಾಖಲಾಗಿದ್ದಕ್ಕೆ ಮಹಿಳೆ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಆರೋಪಿ ಬಾಗಲಕೋಟೆಯ ಶಂಕರಪ್ಪ ಮುಳಗುಂದ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.