– ಪತ್ನಿ ಚೆನ್ನಮ್ಮಗೆ ಮಾತ್ರ ಪಾಸಿಟಿವ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕೋವಿಡ್ ಆರ್‍ಟಿಪಿಸಿಆರ್ ಟೆಸ್ಟ್ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರು ಸ್ಪಷ್ಟನೆ ನೀಡಿದ್ದಾರೆ.
ಇಂದು ಬೆಳಗ್ಗೆ ನನಗೆ ಹಾಗೂ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿದ್ದರು. ಜೊತೆಗೆ ನಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿಯನ್ನೂ ಮಾಡಿದ್ದರು.
Advertisement
My wife Chennamma and I have tested positive for COVID-19. We are self-isolating along with other family members.
I request all those who came in contact with us over the last few days to get themselves tested. I request party workers and well-wishers not to panic.
— H D Devegowda (@H_D_Devegowda) March 31, 2021
Advertisement
ಈ ಬಗ್ಗೆ ಸಂಜೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕೊರೊನಾ ನೆಗೆಟಿವ್ ಇದೆ. ಜ್ವರ ಇರುವುದಕ್ಕೆ ಮಾತ್ರ ಅಡ್ಮಿಟ್ ಆಗಿದ್ದಾರೆ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಾತ್ರ ಪಾಸಿಟಿವ್ ಇದೆ. ಮಣಿಪಾಲ್ ಆಸ್ಪತ್ರೆಯಲ್ಲೇ ಹೆಚ್‍ಡಿಡಿ, ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುವುದು. ಜ್ವರದಿಂದ ಬಳಲುತ್ತಿರುವ ಹೆಚ್‍ಡಿಡಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
Advertisement
ದೇವೇಗೌಡರ ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದು, ಸಿಟಿ ಸ್ಕ್ಯಾನ್‍ನಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ಸಿಟಿ ಸ್ಕ್ಯಾನಿಂಗ್‍ನಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಕೋವಿಡ್ ಚಿಕಿತ್ಸೆ ಕೊಡಬೇಕಾಗುತ್ತದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
Advertisement
ಇದಕ್ಕೂ ಮುನ್ನ ದೇವೇಗೌಡರು ಹಾಗೂ ಚೆನ್ನಮ್ಮ ಅವರಿಗೆ ಪಾಸಿಟಿವ್ ಬಂದಿದೆ ಎಂಬ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ನಾಲ್ವರು, ದ್ವಿತೀಯ ಸಂಪರ್ಕದಲ್ಲಿ 21 ಜನರು ಇದ್ದು, ಒಟ್ಟು 25 ಜನರ ಗಂಟಲು ದ್ರವದ ಮಾದರಿಯನ್ನು ಪಾಲಿಕೆಯ ಆರೋಗ್ಯಾಧಿಕಾರಿಗಳು ಸಂಗ್ರಹಿಸಿದ್ದಾರೆ. ಇವರ ಟ್ರಾವೆಲ್ ಹಿಸ್ಟರಿ ದೆಹಲಿ ಎಂದು ತಿಳಿದು ಬಂದಿದೆ.