ಹುಬ್ಬಳ್ಳಿ: ಜಿಲ್ಲೆಯ ಪೂರ್ವ ಮೀಸಲು ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ.
ಸೂರಜ್ ದೇಶಪಾಂಡೆ (18) ಆತ್ಮಹತ್ಯೆ ಮಾಡಿಕೊಂಡ ಶಾಸಕರ ಪುತ್ರ. ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದು, ಉಪನಗರ ಠಾಣೆ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹದಿನೆಂಟು ವರ್ಷದ ಸೂರಜ್ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ರೂಮಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಆತ್ಮಹತ್ಯೆಗೆ ಶರಣಾಗಿರುವ ಸೂರಜ್, ಎಲ್ಲರೊಂದಿಗೆ ಚೆನ್ನಾಗಿಯೇ ಬೆರೆಯುತ್ತಿದ್ದ. ಸದಾಕಾಲ ಲವಲವಿಕೆಯಿಂದ ಇರುತ್ತಿದ್ದನೆಂದು ಹೇಳಲಾಗಿದೆ. ಈ ಘಟನೆಯ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯಕ್ಕೆ ಈ ಬಗ್ಗೆ ಪೊಲೀಸರು ಸಮಗ್ರ ತನಿಖೆಯನ್ನ ಮಾಡಲು ಮುಂದಾಗಿದ್ದಾರೆ.