ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರು ದಾಖಲಾಗಿದ್ದು, ಸದಾಶಿವ ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀಡಿದ ದೂರನ್ನು ಆಧರಿಸಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಳ್ಳಲಿದ್ದು, ಈ ಮೂಲಕ ಸಿಡಿ ಪ್ರಕರಣದ ತನಿಖೆಗೆ ಸ್ಫೋಟಕ ಟ್ವಿಸ್ಟ್ ಸಿಗಲಿದೆ. ಬೆಂಬಲಿಗರ ಮೂಲಕ ರಮೇಶ್ ಜಾರಕಿಹೊಳಿ ದೂರು ದಾಖಲಿಸಿದ್ದು, ದೂರಿನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಬ್ಲಾಕ್‍ಮೇಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ನಾಲ್ಕು ತಿಂಗಳ ಹಿಂದಿನ ಷಡ್ಯಂತ್ರವನ್ನು ಸಹ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಾರಕಿಹೊಳಿ ಆಪ್ತ ಹಾಗೂ ಮಾಜಿ ಶಾಸಕ ನಾಗರಾಜ್ ಅವರು ರಮೇಶ್ ಜಾರಕಿಹೊಳಿಯವರ ದೂರನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
Advertisement
Advertisement
ಎಫ್‍ಐಆರ್ ದಾಖಲಾಗದಿದ್ದರೆ ತನಿಖೆ ಮುಂದುವರಿಯೋದು ಕಷ್ಟ. ಹೀಗಾಗಿ ಎಫ್‍ಐಆರ್ ದಾಖಲಿಸಲು ಎಸ್‍ಐಟಿ ತಯಾರಿ ನಡೆಸಿತ್ತು. ಅದರಂತೆ ಇಂದು ಮಾಜಿ ಸಚಿವರಿಂದ ದೂರು ಪಡೆದಿದ್ದಾರೆ. ಎಫ್‍ಐಆರ್ ಹಾಕದಿದ್ದರೆ ಕೋರ್ಟಿಗೆ ಹೋಗುವ ಮಾತುಗಳು ಕೇಳಿ ಬರುತ್ತಿದ್ದವು. ಸೋಮವಾರ ಎಸ್‍ಐಟಿ ತನಿಖೆಯ ಬಗ್ಗೆ ಅರ್ಜಿ ಸಲ್ಲಿಕೆಯಾಗಬಹುದು ಎನ್ನಲಾಗಿತ್ತು. ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆದಿತ್ತು. ಹೀಗಾಗಿ ಎಫ್‍ಐಆರ್ ಮಾಡದಿದ್ದರೆ ತನಿಖೆಗೆ ಹಿನ್ನಡೆಯಾಗುತ್ತೆ ಎಂಬ ಉದ್ದೇಶದಿಂದ ಇಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.