ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಚಿವ ಶ್ರೀರಾಮುಲು, ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.#GetWellSoon pic.twitter.com/06MTXPZ71C
— B Sriramulu (@sriramulubjp) August 29, 2020
ಸಚಿವ ಶ್ರೀರಾಮುಲು ಅವರಿಗೂ ಆಗಸ್ಟ್ 9ರಂದು ಕೊರೊನಾ ಸೋಂಕು ತಗುಲಿತ್ತು. ಕೂಡಲೇ ಸಚಿವರು ಆಸ್ಪತ್ರೆಗೆ ದಾಖಲಾಗಿ ಆಗಸ್ಟ್ 16ರಂದು ಡಿಸ್ಚಾರ್ಜ್ ಆಗಿದ್ದರು. ನಂತರ ಕೋವಿಡ್ ನಿಯಮನುಸಾರ 10 ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು. ಸಂಪೂರ್ಣ ಗುಣಮುಖವಾದ ಹಿನ್ನೆಲೆ ಎರಡು ದಿನಗಳ ಹಿಂದೆ ಸಾರ್ವಜನಿಕ ಸೇವೆಗೆ ಮರಳಿದ್ದಾರೆ.