ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.
ಎರಡು ದಿನಗಳ ಹಿಂದೆ ವಿನಯ್ ಕುಲಕರ್ಣಿ ಅವರಿಗೆ ಶೀತ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ವೈದ್ಯರ ಸಲಹೆಯ ಮೇರೆಗೆ ವಿನಯ್ ಕುಲಕರ್ಣಿ ಹೋಂ ಐಸೋಲೇಶನ್ ಗೆ ಒಳಗಾಗಿದ್ದಾರೆ.
Advertisement
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಕೈ ಕಾರ್ಯಕರ್ತರು ಇಬ್ಬರು ನಾಯಕರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.