ಮಾಜಿ ಸಿಎಂ ಸಿದ್ದರಾಮಯ್ಯನ ತಲೆ ಸರಿಯಿಲ್ಲ : ಈಶ್ವರಪ್ಪ

Public TV
1 Min Read
K.S. Eshwarappa Siddaramaiah

ಚಿಕ್ಕೋಡಿ: ಸುಪ್ರೀಂ ತೀರ್ಪಿನ ಬಳಿಕವೂ ಸಿದ್ದರಾಮಯ್ಯ ಅಯೋಧ್ಯೆಯದ್ದು ವಿವಾದಿತ ಮಂದಿರ ಎಂದು ಹೇಳುತ್ತಿದ್ದಾರೆ. ಈ ಕಾರಣಕ್ಕೆ ಸಿದ್ದರಾಮಯ್ಯನವರಿಗೆ ತಲೆ ಸರಿ ಇಲ್ಲ ಎನ್ನುವುದು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಮಾಜಿ ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.

eshwarappa app

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಈಶ್ವರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡಿ, ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ ಜನ ಸಿದ್ದರಾಮಯ್ಯನವರನ್ನು ಛೀ ಥೂ ಎಂದು ಉಗಿಯುತ್ತಿದ್ದಾರೆ ಎಂದರು.

AYODHYA RAMAMANDIR

ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಲ್ಲ ಎಂದಿರುವ ಸಿದ್ದರಾಮಯ್ಯ, ಹಣ ಕೊಡದಿದ್ದರೆ ಕೊಡಬೇಡ ಬಿಡು ಎಂದು ಏಕವಚನದಲ್ಲೇ ಮಾಜಿ ಸಿಎಂ ವಿರುದ್ದ ಹರಿಹಾಯ್ದರು. ಅಲ್ಲದೆ ರಾಮ ಮಂದಿರಕ್ಕೆ ಹಣ ಕೊಡದೇ ಲೆಕ್ಕ ಕೇಳುತ್ತಾರೆ ಎಂದು ಕಿಡಿ ಕಾರಿದರು.

ರಾಜ್ಯದ ಜನ, ದೇಶದ ಜನ ರಾಮನ ಬಗ್ಗೆ ಅಪಮಾನ ಮಾಡಿದ್ದಕ್ಕೆ ಕಾಂಗ್ರೆಸಿಗರನ್ನು ತಿರಸ್ಕಾರ ಮಾಡಿದ್ದಾರೆ. ಇನ್ನೆಷ್ಟು ದಿನ ಮಾತನಾಡುತ್ತಾರೆ ಮಾತನಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *