ಬೆಂಗಳೂರು: ತನ್ನ ವಿರುದ್ಧ ಜನಪದ ಹಾಡು ತಿರುಚಿದ ಆರೋಪ ಕೇಳಿ ಬರುತ್ತಿದ್ದಂತೆಯೇ ಕನ್ನಡ ರ‍್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.
Advertisement
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
Advertisement
Advertisement
ಏನಿದು ಘಟನೆ?:
ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ‍್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದರು. ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ.
Advertisement
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮಲೆ ಮಹದೇಶ್ವರ ಸ್ವಾಮಿ ಗ್ರೂಪ್‍ನಲ್ಲಿ ಚಾಮರಾಜನಗರ ಜಿಲ್ಲೆಯ ಹಲವು ಯುವಕರು ಚಂದನ್ ವಿರುದ್ಧ ಕಿಡಿಕಾರಿದ್ದಾರೆ. ಹಾಡು ವೈರಲ್ ಆದ್ರೂ, ಚಾಮರಾಜನಗರದಲ್ಲಿ ಈ ಹಾಡಿಗೆ ವಿರೋಧ ವ್ಯಕ್ತವಾಗಿದೆ. ಆಗಸ್ಟ್ 23 ರಂದು ಈ ವಿಡಿಯೋ ಬಿಡುಗಡೆಯಾಗಿದ್ದು, ಈಗಾಗಲೇ 35 ಲಕ್ಷಕ್ಕೂ ಅಧಿಕ ವ್ಯೂ ಕಂಡಿದೆ. ಯೂಟ್ಯೂಬ್‍ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.