ಚಿಕ್ಕಬಳ್ಳಾಪುರ: ಯುವಕನೊರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಇಮ್ರಾನ್ ಖಾನ್(25) ಎಂದು ಗುರುತಿಸಲಾಗಿದೆ. ಈತನನ್ನು ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಹೊರವಲಯದಲ್ಲಿರುವ ದರ್ಗಾ ಬಳಿ ನಡೆದಿದೆ.
ಹತ್ಯೆಯಾದ ಇಮ್ರಾನ್ ಖಾನ್ ಶವ ಶಶಿಭೂಷಣ್ ಎಂಬವರ ತೋಟದಲ್ಲಿ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಗೌರಿಬಿದನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಮೃತ ವ್ಯಕ್ತಿ ಗೌರಿಬಿದನೂರು ನಗರದ ಕೆಎಸ್‍ಆರ್ ಟಿಸಿ ಡಿಪೋ ಬಳಿ ವೆಲ್ಡಿಂಗ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಕೊಲೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.