ಹಾವೇರಿ : ಮಾರ್ಕೆಟ್ ಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಟಾಟ್ ಏಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ನೇಕಾರ ಕಾಲೋನಿ ಬಳಿ ನಡೆದಿದೆ.
ಮೃತನನ್ನು ಶಿವರಾಜ್ ಚಳಗೇರಿ (40) ಎಂದು ಗುರುತಿಸಲಾಗಿದೆ. ಈತ ಹೋಗುತ್ತಿದ್ದ ಬೈಕ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ
ಮೃತ ಶಿವರಾಜ್ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದ ನಿವಾಸಿಯಾಗಿದ್ದು, ನಗರದ ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.