ಬೆಂಗಳೂರು: ಮಾರ್ಚ್-ಏಪ್ರಿಲ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ.
ಮಾರ್ಚ್ ನಲ್ಲಿ ಅಂತಿಮ ವರ್ಷದ ಪದವಿ ತರಗತಿ, ಎಂಜಿನಿಯರಿಂಗ್ ಕೋರ್ಸ್‍ಗೆ ಪರೀಕ್ಷೆ ನಡೆಸಲಾಗುತ್ತೆ. ಏಪ್ರಿಲ್‍ನಲ್ಲಿ ಪ್ರಥಮ ವರ್ಷ ಹಾಗೂ ದ್ವಿತೀಯ ವರ್ಷದ ಪದವಿ, ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪರೀಕ್ಷೆಗಳು ನಡೆಸಲು ತೀರ್ಮಾನ ಸರ್ಕಾರ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
Advertisement
Advertisement
ಪದವಿ ತರಗತಿಗಳು ಉತ್ತಮವಾಗಿ ನಡೆಯುತ್ತಿದೆ. ಹೀಗಾಗಿ ಪರೀಕ್ಷೆ ಮಾಡಲು ನಿರ್ಧಾರ ಮಾಡಲಾಗಿದೆ. ಮಾರ್ಚ್- ಏಪ್ರಿಲ್ ನಲ್ಲಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಶೀಘ್ರವೇ ವೇಳಾಪಟ್ಟಿ ಪ್ರಕಟ ಮಾಡುತ್ತೇವೆ. ಪದವಿ ಪರೀಕ್ಷೆಗಳು ಕೇವಲ ಆಫ್ ಲೈನ್ ನಲ್ಲಿ ಮಾತ್ರ ನಡೆಸಲಾಗುತ್ತೆ. ಆಲ್ ಲೈನ್ ಎಕ್ಸಾಂ ಇರೋದಿಲ್ಲ ಅಂತ ಸ್ಪಷ್ಟಪಡಿಸಿದರು. ಇದೇ ವೇಳೆ ಮುಂದಿನ ವರ್ಷದ ಶೈಕ್ಷಣಿಕ ವರ್ಷವನ್ನ ಸೆಪ್ಟೆಂಬರ್-ಅಕ್ಟೋಬರ್ ನಿಂದ ಪ್ರಾರಂಭ ಮಾಡಲಾಗುತ್ತೆ. ಪರಿಸ್ಥಿತಿ ನೋಡಿಕೊಂಡು ಆನ್ ಲೈನ್ ತರಗತಿ ಬೇಕಾ ಅನ್ನೋದನ್ನ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕೊರೊನಾ ನಡುವೆ ಡಿಗ್ರಿ ಕಾಲೇಜುಗಳ ಪ್ರಾರಂಭವಾದ ಬೆನ್ನಲ್ಲೆ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಮಾರ್ಚ್- ಏಪ್ರಿಲ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.