ರಾಯಚೂರು: ಸುರಕ್ಷತಾ ಕ್ರಮಗಳಿಲ್ಲದೆ ರಾಯಚೂರು ನಗರಸಭೆ ಪೌರಕಾರ್ಮಿಕರು ಖಾಸಗಿ ಕೋವಿಡ್ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ.
Advertisement
ರಾಯಚೂರು ನಗರವೊಂದರಲ್ಲೇ 19 ಖಾಸಗಿ ಕೋವಿಡ್ ಆಸ್ಪತ್ರೆಗಳಿದ್ದು, ಆಸ್ಪತ್ರೆ ತ್ಯಾಜ್ಯವನ್ನ ನಗರಸಭೆ ಸಿಬ್ಬಂದಿಗಳೇ ವಿಲೇವಾರಿ ಮಾಡುತ್ತಿದ್ದಾರೆ. ಆದರೆ ನಗರಸಭೆ ಅಧಿಕಾರಿಗಳು ಕಾರ್ಮಿಕರಿಗೆ ನೀಡಬೇಕಾದ ಕನಿಷ್ಠ ಸೌಲಭ್ಯವನ್ನೂ ಸಮರ್ಪಕವಾಗಿ ನೀಡಿದೆ ಬೇಜವಾಬ್ದಾರಿತನ ಮೆರೆದಿದ್ದಾರೆ. ಗ್ಲೌಸ್, ಮಾಸ್ಕ್ ಧರಿಸದೆ ಕೋವಿಡ್ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಪೌರಕಾರ್ಮಿಕರಿಗೆ ಕೊರೊನಾ ಸೋಂಕಿನ ಭಯ ಕಾಡುತ್ತಿದೆ.
Advertisement
Advertisement
ನಗರಸಭೆ ಎಲ್ಲಾ ಪೌರಕಾರ್ಮಿಕರಿಗೂ ಮಾಸ್ಕ್,ಗ್ಲೌಸ್ ಸಮರ್ಪಕವಾಗಿ ವಿತರಿಸದ ಹಿನ್ನೆಲೆ ಕಾರ್ಮಿಕರು ಸುರಕ್ಷತೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಇಡೀ ನಗರವನ್ನ ಸ್ವಚ್ಛವಾಗಿಡುವ ಪೌರಕಾರ್ಮಿಕರಿಗೆ ಸುರಕ್ಷತೆಯಿಲ್ಲದಂತಾಗಿದೆ. ಕಾರ್ಮಿಕರ ಬಗ್ಗೆ ಕಾಳಜಿ ವಹಿಸಬೇಕಾದ ನಗರಸಭೆ ಸೌಲಭ್ಯ ನೀಡದ ಹಿನ್ನೆಲೆ ಅನಿವಾರ್ಯವಾಗಿ ಕೆಲಸ ಮಾಡುತ್ತಿದ್ದೇವೆ ಅಂತ ಪೌರಕಾರ್ಮಿಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
Advertisement