ಹೈದರಾಬಾದ್: ಮಾಹಾಮಾರಿ ಕೊರೊನಾ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಮಧ್ಯೆ ಮಾಸ್ಕ್ ಧರಿಸದ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ದಂಡ ವಿಧಿಸಿದ ಘಟನೆಯೊಂದು ಹೈದರಾಬಾದ್‍ನಲ್ಲಿ ನಡೆದಿದೆ.
ಸಾರ್ಕರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ಪೊಲೀಸ್ ವರಿಷ್ಠಾಧಿಕಾರಿ ನಿರೂಪಿಸುವ ಮೂಲಕವಾಗಿ ಇತರರಿಗೆ ಮಾದರಿಯಾಗಿದ್ದಾರೆ. ಗುಂಟೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಅಮ್ಮಿರೆಡ್ಡಿ ಮಾಸ್ಕ್ ಧರಿಸದವರ ವಿರುದ್ಧ ಭಾನುವಾರ ವಿಶೇಷ ಕಾರ್ಯಾಚರಣೆ ಮಾಡುತ್ತಿದ್ದರು. ಈ ವೇಳೆ ತಳ್ಳೂರು ವೃತ್ತ ನಿರೀಕ್ಷಕ ಮಲ್ಲಿಕಾರ್ಜುನ್ ರಾವ್ ಮಾಸ್ಕ್ ಧರಿಸದೆಯೇ ತಮ್ಮ ಮುಂದೆ ಹಾದು ಹೋಗಿದ್ದನ್ನು ಅಮ್ಮಿರೆಡ್ಡಿಯವರು ಗಮನಿಸಿದ್ದಾರೆ.




