ಹೈದರಾಬಾದ್: ಮಾಸ್ಕ್ ಧರಿಸಿ ಎಂದು ಹೇಳಿದ ಕಾರಣಕ್ಕೆ ಮಹಿಳಾ ಸಿಬ್ಬಂದಿ ಮೇಲೆ ಸರ್ಕಾರಿ ಅಧಿಕಾರಿ ರಾಡ್‍ನಿಂದ ಹಲ್ಲೆ ನಡೆಸಿದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಸದ್ಯ ಪೊಲೀಸರು ಅಧಿಕಾರಿ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿ ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ. ಆರೋಪಿಯನ್ನು ಸಿ ಭಾಸ್ಕರ್ ಎಂದು ಗುರುತಿಸಲಾಗಿದ್ದು, ಆಂಧ್ರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಹೋಟೆಲ್‍ನಲ್ಲಿ ಉಪ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಮಾನ ಹಾನಿ), 355, 324 (ಶಸ್ತ್ರಾಸ್ತ್ರ ಬಳಿಸಿ ಗಾಯಗೊಳಿಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.
Advertisement
The police complaint in the matter states that the incident took place after the woman asked the man to wear a mask. It also mentions that the two had previous enmity. #AndhraPradesh https://t.co/TPz9vtrkrQ
— ANI (@ANI) June 30, 2020
Advertisement
ಮಂಗಳವಾರ ಘಟನೆ ನಡೆದಿದ್ದು, ಕೋವಿಡ್-19 ನಿಯಮಗಳ ಪಾಲನೆ ಮಾಡಲು ಅಧಿಕಾರಿಗೆ ಮಾಸ್ಕ್ ಧರಿಸುವಂತೆ ಮಹಿಳೆ ಹೇಳಿದ್ದರು. ಇಷ್ಟಕ್ಕೇ ಆಕ್ರೋಶಗೊಂಡ ಅಧಿಕಾರಿ ನೇರ ಹೋಟೆಲ್ ಒಳಗೆ ತೆರಳಿ ಮಹಿಳೆಯ ಮೇಲೆ ನಡೆಸಿ ನಿಂಧಿಸಿದ್ದಾನೆ. ಅಲ್ಲದೇ ಸ್ಥಳದಲ್ಲೇ ಇದ್ದ ರಾಡ್‍ನಿಂದ ಮಾರಣಾಂತಿಕ ದಾಳಿಯನ್ನು ನಡೆಸಿದ್ದಾನೆ. ಘಟನೆಯ ಪೂರ್ಣ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಅಧಿಕಾರಿಯ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಘಟನೆಯಲ್ಲಿ ಗಾಯಗೊಂಡಿರುವ 43 ವರ್ಷದ ಮಹಿಳೆ ಕೂರ ಪ್ರವಾಸೋದ್ಯಮ ಇಲಾಖೆಯ ಹೋಟೆಲ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿ ಭಾಸ್ಕರ್ ಮಾಸ್ಕ್ ಧರಿಸದೆ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಮಹಿಳೆ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದರು ಎಂಬ ಮಾಹಿತಿ ಲಭಿಸಿದೆ.
ಘಟನೆ ಕುರಿತು ಆಂಧ್ರ ಪ್ರದೇಶ ಡಿಸಿಪಿ ಗೌತಮ್ ಸ್ವಾಂಗ್ ಅವರು ದಿಶಾ ಪೊಲೀಸ್ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪ್ರರಕಣ ತನಿಖೆ ನಡೆಸಿ ಒಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸೂಚನೆ ನೀಡಿದ್ದಾರೆ. ಮಹಿಳೆಯ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ನೆಲ್ಲೂರು ಘಟನೆಯನ್ನು ಖಂಡಿಸುತ್ತೇವೆ. ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಆರೋಪಿ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.