ಬೆಂಗಳೂರು: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗ್ತಿದೆ. ಇತ್ತ ಮಹಾರಾಷ್ಟ್ರದಲ್ಲಿ ಕೂಡ ಏರಿಕೆಯಾಗ್ತಿದೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಮಾಸ್ಕ್ ಸಾಮಾಜಿಕ ಅಂತರ ಕಾಪಾಡಿ ಅಂತಾ ಹೇಳಿದ್ದಾರೆ. ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.
Advertisement
Advertisement
ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕ ವಿತರಣೆ ಜಾಸ್ತಿ ಆಗಿದೆ. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಮಾಡಲೇ ಬೇಕು ಎಂದು ಅವರು ಹೇಳಿದರು.
Advertisement
ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣವಾಗಿದೆ. ಗಡಿ ಭಾಗಗಳಿಂದ ಹೆಚ್ಚು ಜನ ಬರುತ್ತಾ ಇರೋದೇ ಕೇಸ್ ಏರಿಕೆಗೆ ಕಾರಣ. ಸಭೆ ಸಮಾರಂಭಗಳಿಗೆ ಕಠಿಣ ರೂಲ್ಸ್ ಜಾರಿ ಆಗುತ್ತೆ ಎಂದರು.
Advertisement
ಪ್ರತಿಭಟನೆ, ಸಿನಿಮಾ ಹಾಲ್ ಗಳಿಗೆ ಟಫ್ ರೂಲ್ಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾಳೆ ಪಿಎಂ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್ ಇದೆ. ಆ ಬಳಿಕ ಟಫ್ ರೂಲ್ಸ್ ಜಾರಿಯಾಗುತ್ತಾ ಕಾದು ನೋಡಬೇಕಿದೆ. ಪ್ರತಿಭಟನೆ, ಬಹಿರಂಗ ಸಭೆ-ಸಮಾರಂಭಗಳಿಗೆ ರೂಲ್ಸ್ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಸುಧಾಕರ್ ವಿವರಿಸಿದ್ದಾರೆ.