ಚಿಕ್ಕಮಗಳೂರು: ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಪಾಲಿಸದೆ ಜನವಸತಿ ಪ್ರದೇಶದಲ್ಲಿ ಒಬ್ಬರಿಗೊಬ್ಬರು ಕೈಹಿಡಿದುಕೊಂಡು ಬೇಜವಾಬ್ದಾರಿಯಾಗಿ ಮಾತನಾಡುತ್ತಿದ್ದ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರದ ನಾಲ್ವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೋಸ್ಟ್ ಆಫೀಸ್ ರಸ್ತೆ ಮಧ್ಯೆ ಕೈಹಿಡಿದುಕೊಂಡು ಮಾತನಾಡುತ್ತಿದ್ದ ಸಾಗರ್, ಅಭಿಲಾಷ್, ಕಿರಣ್, ವಾಸುದೇವ್ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಸುಮಾರು ಎರಡು ತಿಂಗಳುಗಳ ಕಾಲ ಲಾಕ್‍ಡೌನ್ ಕೂಡ ಮಾಡಲಾಗಿತ್ತು. ಇದೀಗ ಲಾಕ್‍ಡೌನ್ ಸಡಿಲಿಸಿ, ಅನವಶ್ಯಕವಾಗಿ ಓಡಾಡದಂತೆ, ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದೆ. ಆದರೂ ಕೆಲವರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಪೊಲೀಸರು ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.