ಬೆಂಗಳೂರು: ಮಾಸ್ಟರ್ ಮೈಂಡ್ ಮತ್ತು ರಿಂಗ್ ಮಾಸ್ಟರ್ ಒಂದೇ ಫ್ರೇಮ್‌ನಲ್ಲಿ ಎಂದು ಹೇಳಿ ಬಿಜೆಪಿ ಸಿಡಿ ಪ್ರಕರಣ ಮುಖ್ಯ ಸೂತ್ರಧಾರ, ಮಾಜಿ ಪತ್ರಕರ್ತ ನರೇಶ್ ಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಟ್ಟಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
— BJP Karnataka (@BJP4Karnataka) March 17, 2021
ಬಿಜೆಪಿ ಕರ್ನಾಟಕ ಸರಣಿ ಟ್ವೀಟ್ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡುತ್ತಿದೆ. ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ನಿನ್ನೆ ಟ್ವೀಟ್ ಮಾಡಿತ್ತು.
ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ.
ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.
ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? pic.twitter.com/bItxY8U7At
— BJP Karnataka (@BJP4Karnataka) March 16, 2021
ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಿ. ಈಗಲೂ ಅದೇ ಮಾತು ಹೇಳುತ್ತಿದ್ದೀರಿ. ಯಾರೂ ಕೂಡಾ ನಿಮ್ಮ ಪಾತ್ರದ ಕುರಿತು ಏನೂ ಹೇಳಿಲ್ಲ, ನಿಮಗೆ ಈ ಸಂಶಯ ಬರಲು ಕಾರಣವೇನು ಎಂದು ಡಿಕೆಶಿಯನ್ನು ಪ್ರಶ್ನಿಸಿತ್ತು.
ಮಾನ್ಯ @DKShivakumar
ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ?
ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಿ. ಈಗಲೂ ಅದೇ ಮಾತು ಹೇಳುತ್ತಿದ್ದೀರಿ.
ಯಾರೂ ಕೂಡಾ ನಿಮ್ಮ ಪಾತ್ರದ ಕುರಿತು ಏನೂ ಹೇಳಿಲ್ಲ, ನಿಮಗೆ ಈ ಸಂಶಯ ಬರಲು ಕಾರಣವೇನು? pic.twitter.com/vkyld1Mp5E
— BJP Karnataka (@BJP4Karnataka) March 15, 2021