ಮಿನಿಸ್ಟರ್ ಎಂದರೆ ದೇವಲೋಕದಿಂದ ಇಳಿದು ಬಂದವರಾ : ಸುಧಾಕರ್ ವಿರುದ್ಧ ರೇಣುಕಾಚಾರ್ಯ ಕಿಡಿ

Public TV
1 Min Read
FotoJet 3 5

ಬೆಂಗಳೂರು: ಮಿನಿಸ್ಟರ್ ಎಂದರೆ ದೇವಲೋಕದಿಂದ ಇಳಿದು ಬಂದವರಾ? ಸಿಕ್ಕ ಅವಕಾಶವನ್ನು ಸದುಪಯೊಗಪಡಿಸಿಕೊಳ್ಳಿ. ದುರಹಂಕಾರ ಒಳ್ಳೆಯದಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

renuka charya

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಿನಿಸ್ಟರ್ ಎಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಇವರಿಂದಲೇ ಸರ್ಕಾರ ಬಂದಿದೆ ಎಂಬ ಭ್ರಮೆ ಬೇಡ. ಸಿಕ್ಕ ಅವಕಾಶವನ್ನು ಸದುಪಯೊಗಪಡಿಸಿಕೊಳ್ಳಿ. ದುರಹಂಕಾರ ಒಳ್ಳೆಯದಲ್ಲ. ನಡವಳಿಕೆ ಸರಿಪಡಿಸಿಕೊಳ್ಳಿ. ನಾವೇನು ಬಿಟ್ಟಿ ಬಂದಿದ್ದೀವಾ? ಜನ ಆರಿಸಿ ಕಳಿಸಿರುವ ನಮಗೆ ಅವಮಾನ ಮಾಡಬೇಡಿ. ಆಡಳಿತ ಪಕ್ಷದ ಶಾಸಕರಿಗೆ ಇವರು ಅವಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ವಿಧಾನಸೌಧದ ಆವರಣದಲ್ಲಿ ಧರಣಿ ಮಾಡುತ್ತೇವೆ ಎಂದು ರೇಣುಕಾಚಾರ್ಯರವರು ನೇರವಾಗಿ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

vlcsnap 2018 06 14 07h30m48s163

ಸಚಿವ ಸುಧಾಕರ್ ನನ್ನ ಕೈಗೆ ಸಿಗುತ್ತಿಲ್ಲ. ಫೋನ್ ಮಾಡಿದರೆ ಅವರ ಪಿಎ ಹಾಗೂ ಪಿ.ಎಸ್‍ಗಳು ಕರೆ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ಜೆಡಿಎಸ್‍ನಿಂದ ಬಂದ ಎಲ್ಲ ಸಚಿವರು ಹೀಗೆ ಎಂದು ನಾನು ಹೇಳುತ್ತಿಲ್ಲ. ಕೆಲ ಸಚಿವರು ಕೈಗೆ ಸಿಗುತ್ತಿಲ್ಲ ಎಂದು ದೂರಿದರು.

hbl sudhakar

ನಾನು ಹೊನ್ನಾಳಿ ಕ್ಷೇತ್ರದ ಅಭಿವೃದ್ದಿಗಾಗಿ ಹತ್ತಾರು ಭಾರಿ ಭೇಟಿಯಾಗಿದ್ದೇನೆ. ಪತ್ರ ಬರೆದಿದ್ದೇನೆ, ಆದರೂ ಏನೂ ಪ್ರಯೋಜನವಾಗಿಲ್ಲ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜೀ ಆಗುವ ಮಾತೇ ಇಲ್ಲ. ನಾನು ಧರಣಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿನ್ನೆ ಅವರ ಪಿಎಸ್ ಫೋನ್ ಮಾಡಿ ಕೆಲವು ಕೆಲಸ ಆಗಿದೆ ಎಂದು ಹೇಳಿದ್ದಾರೆ. ಆದರೂ ನಾನು ಕೆಲಸ ಆಗಿದ ಮಾತ್ರಕ್ಕೆ ಸುಮ್ಮನಿರುವುದಿಲ್ಲ. ಪಾಪ ಅನೇಕ ನಮ್ಮ ಶಾಸಕರು ಬಾಯಿ ಇಲ್ಲದ ಶಾಸಕರಿದ್ದಾರೆ. ಅವರ ಕೆಲಸಗಳೂ ಆಗಬೇಕು, ಐದಾರು ಸಚಿವರು ಕೈಗೆ ಸಿಗುತ್ತಿಲ್ಲ. ನಾನು ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *