ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋದ ಯುವಕನೊರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಭಕ್ತರಹಳ್ಳಿ ಅರಸಿಕೆರೆಯಲ್ಲಿ ನಡೆದಿದೆ.
ಮೂಲತಃ ಗದಗ ಮೂಲದ ಮೊಹಮದ್ ಹುಸೇನ್ ಮೃತ ಯುವಕ. ಸಿವಿಲ್ ಇಂಜಿನಿಯರ್ ಆಗಿದ್ದ ಮೃತ ಯವಕ ಲಾಕ್‍ಡೌನ್ ರಜೆಯಲ್ಲಿ ಸ್ನೇಹಿತರ ಜೊತೆ ಮೀನು ಹಿಡಿಯಲು ಅರಸಿಕೆರೆಗೆ ತೆರಳಿದ್ದ. ಈ ವೇಳೆ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
ಹುಸೇನ್ ಜೊತೆಗಿದ್ದ ಇತರ ಸ್ನೇಹಿತರು ರಕ್ಷಣೆ ಮಾಡಲು ಪ್ರಯತ್ನಿಸಿದರೂ ಕೂಡ ಸಾಧ್ಯವಾಗದೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.