ನವದೆಹಲಿ: ಮುಂದಿನ 2 ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೆರಿಯಾ ಹೇಳಿದ್ದಾರೆ.
ಕೊರೊನಾ ಲಸಿಕೆ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಭಾರತ ಮುಂದಿನ 2 ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ವಿದೇಶಗಳಿಂದ ಲಸಿಕೆಯನ್ನು ಆಮದು ಮಾಡಲಿದೆ. ಹೀಗಾಗಿ ಕೊರತೆಯಾಗುವುದಿಲ್ಲ ಎಂದು ತಿಳಿಸಿದರು.
ಯುವ ಜನತೆಗೆ 3-4 ತಿಂಗಳ ನಂತರ ಲಸಿಕೆ ನೀಡಬಹುದು. ಆದರೆ ಎರಡಕ್ಕಿಂತ ಹೆಚ್ಚು ರೋಗಗಳಿಂದ ಬಳಲುವ ಮಂದಿಗೆ ಮೊದಲು ಲಸಿಕೆ ನೀಡಬೇಕು. ಇದರಿಂದಾಗಿ ಕೋವಿಡ್ ಸಾವುಗಳನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಭಾರತದಲ್ಲಿ ಸದ್ಯ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ. ಇದಕ್ಕೆ ಹೊಸದಾಗಿ ರಷ್ಯಾ ಅಭಿವೃದ್ಧಿ ಪಡಿಸಿದ ಸ್ಪುಟ್ನಿಕ್ ವಿ ಲಸಿಕೆ ಸೇರ್ಪಡೆಯಾಗಿದೆ. ಶುಕ್ರವಾರ ಮೊದಲ ಬಾರಿಗೆ ಡೋಸ್ ನೀಡಲಾಗಿದ್ದು ಮುಂದಿನ ವಾರ ಈ ಲಸಿಕೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.