ಹಾಸನ: ವಿಮಾನ ನಿಲ್ದಾಣ ಕಾಮಗಾರಿ ಮೂಲ ಯೋಜನೆಯಂತೆಯೇ ಆಗಬೇಕು. ಇಲ್ಲದಿದ್ದರೆ ಜೂ. 20 ರಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Advertisement
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯ ಆರು ಶಾಸಕರು ಕೂಡ ದೇವೇಗೌಡರ ನೇತೃತ್ವದಲ್ಲಿ ಮೂಲ ಯೋಜನೆಯಂತೆಯೇ ಕಾಮಗಾರಿ ಮಾಡಬೇಕೆಂದು ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳಾದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಮುಖ್ಯಮಂತ್ರಿಗಳು ಹಾಸನಕ್ಕೆ ಭೇಟಿ ನೀಡಿದಾಗ ದೇವೇಗೌಡರ ಮಾರ್ಗದರ್ಶನದಲ್ಲಿ ಕಾಮಗಾರಿ ಆರಂಭಿಸುತ್ತೇನೆ ಎಂದಿದ್ದರು. ಆದರೆ ಈಗ ಕಾಟಾಚಾರಕ್ಕೆ ಕಾಮಗಾರಿಯನ್ನು ಮಾಡಲು ಮುಂದಾಗಿದ್ದಾರೆ. ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಶ್ವಾಸನೆಯನ್ನು ಈಡೇರಿಸಬೇಕು ಅದನ್ನು ಬಿಟ್ಟು ಈ ರೀತಿ ದ್ರೋಹ ಬಗೆಯುವುದಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ನಾಯಕತ್ವ ಬಗ್ಗೆ ಭಿನ್ನಾಭಿಪ್ರಾಯವಿಲ್ಲ: ನಳೀನ್ ಕುಮಾರ್ ಕಟೀಲ್
Advertisement
Advertisement
ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಬಾರದು ಸತತವಾಗಿ 13 ವರ್ಷಗಳಿಂದ ವಿಮಾನ ನಿಲ್ದಾಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಜೆಡಿಎಸ್ ಶಾಸಕರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ದ್ವೇಷದಿಂದ ಈ ರೀತಿ ಮಾಡುತ್ತಿದ್ದಾರೆ. ಹಾಗೇನಾದರೂ ಆದರೆ ದೇವೇಗೌಡರ ನೇತೃತ್ವದಲ್ಲಿ ಜಿಲ್ಲೆಯ ಆರು ಜನ ಜೆಡಿಎಸ್ ಶಾಸಕರು ಬೆಂಗಳೂರಿನಲ್ಲಿ ಅಥವಾ ಹಾಸನದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಒಳ್ಳೆಯ ಅಭಿವೃದ್ಧಿ ತಡೆಹಿಡಿದಿದ್ದಾರೆ ಎನ್ನುವವರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದು ಎಂದು ಕರೆಕೊಟ್ಟರು. ಇದನ್ನೂ ಓದಿ: ಸಿನಿಮಾದಲ್ಲಿ ಸೋನು ಸೂದ್‍ಗೆ ಹೊಡೆದದ್ದಕ್ಕೆ ಮನೆ ಟಿವಿ ಕುಟ್ಟಿಪುಡಿ ಮಾಡಿದ ಪೋರ
Advertisement
ವಿಮಾನ ನಿಲ್ದಾಣದ ಹೆಸರಲ್ಲಿ ನಾನು ರಾಜಕೀಯ ಮಾಡುತ್ತಾ ಇಲ್ಲ. ಕೊರೊನಾ ಕಾರಣದಿಂದ ಹಣಕಾಸಿನ ತೊಂದರೆ ಇದ್ದರೆ ನಿಲ್ಲಿಸಲಿ. ಅದನ್ನು ಬಿಟ್ಟು ಈ ರೀತಿ ರಾಜಕೀಯ ಮಾಡಬಾರದು ಎಂದು ಗುಡುಗಿದರು. ಇದನ್ನೂ ಓದಿ: ನಾಳೆಯಿಂದ ಪಿಯುಸಿ ಕಾಲೇಜುಗಳು ಪ್ರಾರಂಭ- ಆನ್‍ಲೈನ್ ಮೂಲಕ ಪಠ್ಯ ಬೋಧನೆ