ಬೆಂಗಳೂರು: ಮುಷ್ಕರ ನಿಲ್ಲಿಸಿ, ಕೂಡಲೇ ಸೇವೆ ಆರಂಭಿಸಿ ಸಾರಿಗೆ ನೌಕರರಿಗೆ ಹೈಕೋರ್ಟ್ ಇಂದು ಸೂಚನೆ ನೀಡಿದೆ. ಈ ಮೂಲಕ 14 ದಿನಗಳ ಸಾರಿಗೆ ನೌಕರರ ಮುಷ್ಕರ ಇಂದಿಗೆ ಕೊನೆಯಾಗುವ ಸಾಧ್ಯತೆಯಿದೆ.
Advertisement
ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಸೂಚನೆ ನೀಡಿ ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.
Advertisement
Advertisement
ಸರ್ಕಾರದ ಪರವಾಗಿ ಹಾಜರಾಗಿದ್ದ ಎಜಿ ಪ್ರಭುಲಿಂಗ ನಾವದಗಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಕಾರ್ಮಿಕರ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದೆ. ಸಾರಿಗೆ ನೌಕರರ ಮುಷ್ಕರ ಕಾನೂನುಬಾಹಿರವೆಂದು ಘೋಷಿಸಲಾಗಿದೆ. ಕೆಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣಿಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
Advertisement
ನ್ಯಾಯಾಲಯದ ಆದೇಶದ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ನಮಗೆ ನ್ಯಾಯಾಲಯದ ಪೂರ್ಣ ಪ್ರಮಾಣದ ಆದೇಶವನ್ನ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.