ಚಿಕ್ಕಮಗಳೂರು: ಮೂರು ದಶಕಗಳಿಂದ ರಸ್ತೆ ದುರಸ್ಥಿಯಾಗದ ಹಿನ್ನೆಲೆ ಸ್ಥಳೀಯರು ರಸ್ತೆ ಮಧ್ಯೆಯೇ ಗಿಡ ನೆಟ್ಟು ಆಕ್ರೋಶ ಹೊರಹಾಕಿರೋ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಶೃಂಗೇರಿಯ ಅಡ್ಡಗದ್ದೆ ಗ್ರಾಮದಿಂದ ಚಿತ್ರವಳ್ಳಿ ಮೂಲಕ ಎ.ಜಿ.ಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು ಮೂರು ಕಿ.ಮೀ. ರಸ್ತೆ ಹದಗೆಟ್ಟಿದ್ದು ಮಳೆಗಾಲ ಆರಂಭವಾಗುತ್ತಿದೆ, ಕೂಡಲೇ ರಸ್ತೆಯನ್ನ ದುರಸ್ಥಿ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ನೇತ್ರವಳ್ಳಿ, ಅಣ್ಣುಕೂಡಿಗೆ, ಬೇರುಕೂಡಿಗೆರೆ, ಹುಲುಗಾರುತೋಟ, ಅಸಗೋಡು, ಕುಂಬ್ರಿಹಡ್ಲು ಹಾಗೂ ಎ.ಜಿ.ಕಟ್ಟೆ ಭಾಗದ ಸಾರ್ವಜನಿಕರು ರಸ್ತೆಯಲ್ಲಿ ಗಿಡ ನೆಟ್ಟು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಈ ರಸ್ತೆ ಶೃಂಗೇರಿ-ಕೊಪ್ಪ ತಾಲೂಕಿನ ಗಡಿಭಾಗದಲ್ಲಿದೆ. ಕಳೆದ ಮೂವತ್ತೈದು ವರ್ಷದಿಂದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಉಪಯೋಗವಾಗಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ದಿವ್ಯನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ ರಸ್ತೆಗೆ ಶಾಶ್ವತವಾದ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
Advertisement
ಕೂಡಳೆ ರಸ್ತೆಯನ್ನ ದುರಸ್ಥಿಗೊಳಿಸದಿದ್ದರೆ ಮುಂಬರುವ ಎಲ್ಲಾ ಸಾರ್ವತ್ರಿಕ ಚುನಾವಣೆಗಳನ್ನ ಬಹಿಷ್ಕರಿಸೋದಾಗಿ ಎಚ್ಚರಿಕೆ ನೀಡಿದ್ದಾರೆ. ಸುಮಾರು ಮೂವತ್ತು ವರ್ಷಗಳಿಂದ ರಸ್ತೆ ಸ್ಥಿತಿ ಇದೇ ರೀತಿ ಇದೆ. ಈಗ 40 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಿಸಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆ ಹಣದಿಂದ ಏನು ಮಾಡಲು ಸಾಧ್ಯವಿಲ್ಲ. ಅದು ಕೂಡ ಆಶ್ವಾಸನೆ ಅಷ್ಟೆ. ಇಂತಹ ಆಶ್ವಾಸನೆ ಬಹಳಷ್ಟಾಗಿದೆ, ಕೆಲಸ ಮಾಡುವುದಿಲ್ಲ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಾರದ ಹಿಂದೆ ದುಬೈನಿಂದ ಉಡುಪಿಗೆ ಬಂದಿದ್ದ ಮಹಿಳೆ ನಿಗೂಢ ಸಾವು
Advertisement
ಈ ಮಾರ್ಗದಲ್ಲಿ ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಹಲವು ವರ್ಷಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ. ಮಳೆಗಾಲದ ಸಮಯದಲ್ಲಿ ಅನಾರೋಗ್ಯ ಪೀಡಿತರನ್ನ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದಂತಾಗುತ್ತೆ. ಈ ಭಾಗದಲ್ಲಿ ಸುಮಾರು 700ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು ಪ್ರತಿ ವರ್ಷ ಗ್ರಾಮಸ್ಥರೇ ಸೇರಿ ರಸ್ತೆ ದುರಸ್ಥಿ ಮಾಡುತ್ತೇವೆ ಎಂದು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.