– ನಾಗರಹೊಳೆ, ಬಂಡಿಪುರ ಸಫಾರಿ ಮತ್ತೆ ಬಂದ್
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಮೈಸೂರು ಅರಮನೆಗೂ ಕೊರೊನಾ ಭೀತಿ ಕಾಡುತ್ತಿದೆ. ಮೂರು ದಿನ ಅರಮನೆಯನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದೆ.
ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಇವತ್ತು ಒಂದು ದಿನ ಅರಮನೆ ಆವರಣ ಸ್ಯಾನಿಟೈಸ್‍ಗಾಗಿ ನಿರ್ಬಂಧ ಮಾಡಲಾಗಿದೆ.
Advertisement
Advertisement
ಅರಮನೆ ಹಿಂಬದಿ ಆವರಣದಲ್ಲಿ ಒಂಟೆಯನ್ನು ಕಟ್ಟಲಾಗಿದೆ. ಇಲ್ಲಿ ಒಂಟೆಯನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿಯ ಮನೆಯಲ್ಲಿರುವ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಯಾವುದೇ ಆತಂಕ ಪಡುವಾಗಿಲ್ಲ, ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ ಎಂದು ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.
Advertisement
ಇನ್ನೂ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ನಾಗರಹೊಳೆ, ಬಂಡಿಪುರ ಸಫಾರಿಯನ್ನು ಮತ್ತೆ ಬಂದ್ ಮಾಡಲಾಗಿದೆ. ಸಫಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಗುರುವಾರದಿಂದ ಹೆಚ್.ಡಿ.ಕೋಟೆ ತಾಲೂಕಿನಾದ್ಯಂತ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.
Advertisement
ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯ ಹೋಂಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯ ನೀಡುವಂತಿಲ್ಲ. ನಾಗರಹೊಳೆ ಹಾಗೂ ಬಂಡಿಪುರದಲ್ಲಿ ಸಫಾರಿಗೂ ಅವಕಾಶ ಇಲ್ಲ. ಸದ್ಯ ಇರುವ ಪ್ರವಾಸಿರನ್ನ ಅವಧಿ ಮುಗಿಸಿ ವಾಪಸ್ ಕಳುಹಿಸಿ. ಮುಂದಿನ ಆದೇಶದವರೆಗೂ ಇಡೀ ತಾಲೂಕಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಮೂರನೇ ಆಷಾಢ ಶುಕ್ರವಾರ ಹಾಗೂ ವಾರಾಂತ್ಯ ಶನಿವಾರ, ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿದೆ. ಇದರ ಜೊತೆಗೆ ಸೋಮವಾರ ಚಾಮುಂಡೇಶ್ವರಿ ದೇವಿಯ ಜನ್ಮೋತ್ಸವವಿರುವ ಕಾರಣ ಹಾಗೂ ಆಷಾಢ ಮಾಸದ ಕಡೆಯ ಮಂಗಳವಾರ ಸೇರಿ ಸತತ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮಾಡಲಾಗಿದೆ.