ಲಕ್ನೋ: ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ಟೇಬಲ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಪೊಲೀಸರ ನರಹತ್ಯೆಗೈದ ಹಂತಕನ ಮನೆ ಉಡೀಸ್- ಐಷಾರಾಮಿ ಕಾರುಗಳು ಜಖಂ
ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೃಷ್ಣ ಕುಮಾರ್ ಶರ್ಮಾ ಹಾಗೂ ಕಾನ್ಸ್‌ಟೇಬಲ್ ರಾಜೀವ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಅವರ ವಿರುದ್ಧ ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಇವರೆಲ್ಲರು ಚೌಬೆಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಕಾನ್ಪುರ ಎಸ್‍ಎಸ್‍ಪಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.
Advertisement
Advertisement
ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಸಾವಿಗೆ ಸಂಬಂಧಿಸಿದಂತೆ ಮೂವರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಪೊಲೀಸರ ವಿರುದ್ಧ ಎಫ್‍ಐಆರ್ ಕೂಡ ದಾಖಲಿಸಲಾಗಿದೆ. ವಿಚಾರಣೆಯ ವೇಳೆ ಈ ಹತ್ಯೆಯಲ್ಲಿ ಮೂವರು ಪೊಲೀಸರು ಭಾಗಿಯಾಗಿರುವುದು ಸಾಬೀತಾದರೆ ಅವರು ಮುಂದಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಸ್‍ಎಸ್‍ಪಿ ತಿಳಿಸಿದೆ.
Advertisement
ಇನ್ನೂ ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟರೆ 2.50 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಉತ್ತರ ಪ್ರದೇಶ ಪೊಲೀಸರು ಭಾನುವಾರ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಆದರೆ ಸೋಮವಾರ ಬಹುಮಾನವನ್ನು 2.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸದ್ಯಕ್ಕೆ ಪೊಲೀಸರು ವಿಕಾಸ್ ದುಬೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ
ವಿಕಾಸ್ ದುಬೆಗೆ ಪೊಲೀಸರು ಅರೆಸ್ಟ್ ಮಾಡಲು ಬರುತ್ತಾರೆ ಎಂದು ಮೊದಲೇ ಗೊತ್ತಿತ್ತು. ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ ನೀಡುವವರು ಇದ್ದು, ಘಟನೆ ನಡೆದ ದಿನ ಚೌಬೆಪುರ ಪೊಲೀಸ್ ಠಾಣೆಯಿಂದ ಓರ್ವ ಪೊಲೀಸ್ ಅಧಿಕಾರಿ ಕರೆ ಮಾಡಿ ನಿನ್ನನ್ನು ಅರೆಸ್ಟ್ ಮಾಡಲು ಪೊಲೀಸರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು ಅಂತ ಬಂಧಿತ ದಯಾ ಶಂಕರ್ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದನು.
ಪೊಲೀಸರು ನನ್ನನ್ನು ಅರೆಸ್ಟ್ ಮಾಡಿದರೆ ನಾನೂ ಜೈಲು ಪಾಲಾಗುತ್ತೇನೆ ಎಂದು ವಿಕಾಸ್ ದುಬೆಗೆ ಗೊತ್ತಿತ್ತು. ಆದ್ದರಿಂದ ಆತ ವಿಷಯ ತಿಳಿಯುತ್ತಿದ್ದಂತೆ ತನ್ನ ಗ್ಯಾಂಗಿನ ಹುಡುಗರನ್ನು ಕರೆಸಿಕೊಂಡು ತಮ್ಮ ಗ್ರಾಮದಲ್ಲಿ ಉಳಿಸಿಕೊಂಡಿದ್ದ. ಪೊಲೀಸರಿಂದ ಮೊದಲೇ ಮಾಹಿತಿ ಸಿಕ್ಕ ಕಾರಣ ಪೊಲೀಸರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದನು. ಅದರಂತೆ ಗ್ರಾಮಕ್ಕೆ ಬಂದ ಪೊಲಿಸರನ್ನು ರಸ್ತೆಯಲ್ಲೇ ಅಡ್ಡಗಟ್ಟಿ ಕೊಂದು ಹಾಕಿದ್ದಾನೆ ಎಂದು ದಯಾ ತಿಳಿಸಿದ್ದನು.
Kanpur: House of the history-sheeter Vikas Dubey, the main accused in Kanpur encounter case, being demolished by district administration. More details awaited.
8 policemen were killed in the encounter which broke out when police went to arrest him in Bikaru, Kanpur yesterday. pic.twitter.com/gukyZZwfl9
— ANI UP/Uttarakhand (@ANINewsUP) July 4, 2020