Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ

Bengaluru City

ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ

Public TV
Last updated: April 23, 2021 9:46 pm
Public TV
Share
3 Min Read
dcm ashwath narayan
SHARE

– ಮೆಡಿಕಲ್ ಕಿಟ್, ಚಿತಾಗಾರ ಸಮಸ್ಯೆ, ರೆಮ್‍ಡಿಸಿವಿರ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ

ಬೆಂಗಳೂರು: ನಗರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಅಥವಾ ಕೋವಿಡ್‍ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಕೂಡಲೇ ಮೃತ ದೇಹವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಬೇಕು. ಮೃತದೇಹ ನೀಡುವುದು ತಡವಾದರೆ ಆಸ್ಪತ್ರೆ ವಿರುದ್ಧ ಕ್ರಮ ಜರುಗಿಸಿ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2021 04 23 at 7.25.58 PM e1619194377916

ಶುಕ್ರವಾರ ಕೋವಿಡ್ ನಿರ್ವಹಣೆ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಿಂದ ಮೃತದೇಹವನ್ನು ಸಂಬಂಧಿಕರಿಗೆ ತಡವಾಗಿ ನೀಡುತ್ತಿರುವುದರಿಂದ ಚಿತಾಗಾರಗಳಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ಒಮ್ಮೆಗೇ ಮೃತದೇಹಗಳನ್ನು ತರುತ್ತಿರುವುದರಿಂದ ಅವುಗಳ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಸೂಚಿಸಿದರು.

ಮೃತರ ಸಂಬಂಧಿಕರು ಮೊದಲೇ ದುಃಖದಲ್ಲಿರುತ್ತಾರೆ. ಅವರ ನೋವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಆಗಬಾರದು. ಕೂಡಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಮೃತದೇಹವನ್ನು ಹಸ್ತಾಂತರ ಮಾಡಬೇಕು ಎಂದರು.

corona ambulence

ಗ್ಯಾಸ್ ಚಿತಾಗಾರ:
ನಗರದ 13 ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಿರುವ ಕಾರಣ ಶವಸಂಸ್ಕಾರ ತಡ ಆಗುತ್ತಿದೆ. ಹೀಗಾಗಿ ಪ್ರಾಯೋಗಿಕವಾಗಿ ಸುಮ್ಮನಹಳ್ಳಿ ಮತ್ತು ಗಿಡ್ಡ ಹಳ್ಳಿಯಲ್ಲಿ ಗ್ಯಾಸ್ ಚಿತಾಗಾರಗಳನ್ನು ತುರ್ತಾಗಿ ತೆರೆಯಲು ಉದ್ದೇಶಿಸಲಾಗಿದೆ. ಇದು ಯಶಸ್ವಿಯಾದರೆ ಇತರೆಡೆಯೂ ಆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಚಿತಾಗಾರಕ್ಕೂ 15 ಸ್ಟ್ರೆಚರ್‍ಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಚಿತಾಗಾರಕ್ಕೂ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳಿದ್ದರೆ ಬಗೆಹರಿಸುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.

Held an emergency meeting in Bengaluru with the Chief Minister’s Political Secretary, Shri @SRVishwanathBJP, @BBMPCOMM and senior officials on the current situation.

1/4 pic.twitter.com/5ig7OioeeL

— Dr. Ashwathnarayan C. N. (@drashwathcn) April 23, 2021

ಪ್ರತಿ ಆರೋಗ್ಯ ಸೇವಾ ಕೇಂದ್ರಕ್ಕೂ ಅನುದಾನ
ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರಿಗೆ, ಅದರಲ್ಲೂ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಕೊಡಮಾಡುವ ಮೆಡಿಕಲ್ ಕಿಟ್ ಕೊರತೆ ಉಂಟಾಗಿದೆ. ಕೂಡಲೇ ಈ ಕಿಟ್‍ಗಳನ್ನು ಖರೀದಿ ಮಾಡಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ತಲಾ 2 ಲಕ್ಷ ರೂ. ನೀಡಲಾಗಿದೆ. ಇದು ಸಾಕಾಗುವುದಿಲ್ಲ, ಹೀಗಾಗಿ ವಿಧಾನಸಭಾ ಕ್ಷೇತ್ರವಾರು, ಬಿಬಿಎಂಪಿ ವಿಭಾಗವಾರು ಇನ್ನೂ ಹೆಚ್ಚಿನ ಅನುದಾನ ಅಗತ್ಯ ಇದೆ. ತಕ್ಷಣ ಒದಗಿಸಬೇಕು ಎಂದು ಗೌರವ್ ಗುಪ್ತಾ ಅವರಿಗೆ ಸೂಚಿಸಿದರು. ಹಣ ಒದಗಿಸುವ ಭರವಸೆಯನ್ನು ಗುಪ್ತಾ ನೀಡಿದರು.

corona ambulence 2

ಕೋವಿಡ್ ಸೋಂಕಿತರಿಗೆ ಎಲ್ಲಿಯೂ ರೆಮ್‍ಡಿಸಿವಿರ್ ಸೇರಿ ಯಾವುದೇ ಔಷಧ ಅಥವಾ ಕಿಟ್‍ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಕೋವಿಡ್ ಸಹಾಯವಾಣಿ 1912 ಸಂಖ್ಯೆಗೆ ಕೆರೆಗಳು ಹೆಚ್ಚು ಬರುತ್ತಿವೆ. ಸಹಾಯವಾಣಿ ಕೇಂದ್ರದಲ್ಲಿ ಸದ್ಯಕ್ಕೆ ಕರೆ ಸ್ವೀಕರಿಸಲು 30 ಜನರಿದ್ದು, ಇನ್ನೂ 30 ಜನರನ್ನು ನಿಯೋಜಿಸುವಂತೆ ಸೂಚಿಸಿದ್ದೇನೆ. ಕರೆ ಮಾಡುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸಿ ಕೂಡಲೇ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ರಾಜ್ಯದಲ್ಲಿ 7 ಕಡೆ ಕೋವಿಡ್ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಅಲ್ಲಿಂದ ಲಸಿಕೆ ಬಂದ ಮೇಲೆ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಟ್ಟು ಸಮರ್ಪಕವಾಗಿ ವಿತರಣೆ ಮಾಡಬೇಕು. ದೆಹಲಿಯಲ್ಲಿ ಆದಂತೆ ಯಾವುದೇ ರೀತಿಯಲ್ಲೂ ವ್ಯತ್ಯಯ ಆಗಬಾರದು. ರಾಜ್ಯದಲ್ಲಿ 280 ಆಸ್ಪತ್ರೆಗಳಿಂದ ರೆಮ್‍ಡಿಸಿವಿರ್ ಔಷಧಿಗೆ ಬೇಡಿಕೆ ಬಂದಿದೆ. ಬೇಡಿಕೆ ಅನುಸಾರ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

corona virus 2 1

ಸಭೆಯಲ್ಲಿ ಗೌರವ್ ಗುಪ್ತಾ ಜೊತೆ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಔಷಧ ನಿಯಂತ್ರಣ ಇಲಾಖೆಯ ಉಪ ನಿರ್ದೇಶಕ ಸುರೇಶ್ ಹಾಗೂ ಇತರರು ಇದ್ದರು.

TAGGED:bbmpCorona VirusDCM Ashwath NarayanPublic TVಕೊರೊನಾ ವೈರಸ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬಿಬಿಎಂಪಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
33 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
34 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?