ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಗುಡ್ ಲಭ್ಯವಾಗಿದ್ದು, ಸ್ಮಾರ್ಟ್ ಕಾರ್ಡ್ ಗಳ ಅವಧಿಯನ್ನು ಮೆಟ್ರೋ ನಿಗಮ 10 ವರ್ಷಗಳಿಗೆ ವಿಸ್ತರಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೊದಲು ಸ್ಮಾರ್ಟ್ ಕಾರ್ಡ್ ಗಳ ಅವಧಿ ಕೇವಲ ಒಂದು ವರ್ಷಕ್ಕೆ ಸೀಮಿತವಾಗಿತ್ತು. ಇದೀಗ ಈ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲಾಗಿದೆ. ಈ ಹಿಂದೆ ಪಡೆದ ಹಳೆ ಕಾರ್ಡ್ ಗಳಿಗೂ ಇದು ಅನ್ವಯವಾಗಲಿದ್ದು, ಹಳೆಯ ಹಾಗೂ ಹೊಸ ಇನ್ನು ಮುಂದೆ ಪಡೆಯುವ ಹೊಸ ಸ್ಮಾರ್ಟ್ ಕಾರ್ಡ್ ಗಳಿಗೂ ಇದು ಅನ್ವಯವಾಗಲಿದೆ. ಸ್ಮಾರ್ಟ್ ಕಾರ್ಡ್‍ಗಳನ್ನು 2030ರ ವರೆಗೂ ಬಳಸಲು ಅನುಮತಿ ನೀಡಲಾಗಿದೆ.
Advertisement
Advertisement
ಕೊರೊನಾ ಲಾಕ್‍ಡೌನ್ ಎಫೆಕ್ಟ್ ನಿಂದ ಬರೋಬ್ಬರಿ ಐದಾರು ತಿಂಗಳ ಕಾಲ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಕೊರೊನಾ ಮುನ್ನ ಕೊಂಡುಕೊಂಡಿದ್ದ ಸಾವಿರಾರು ಪ್ರಯಾಣಿಕರ ಕಾರ್ಡ್ ಗಳ ಅವಧಿ ಮುಗಿದಿದೆ. ಹೀಗಾಗಿ ಹೊಸ ಸ್ಮಾರ್ಟ್ ಕಾರ್ಡ್ ಖರೀದಿಸಿ ಪ್ರಯಾಣ ಮಾಡಬೇಕಾಗಿದ್ದು, ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದೆ. ಈ ಹಿನ್ನೆಲೆ ಹಳೆಯ ಸ್ಮಾರ್ಟ್ ಕಾರ್ಡ್ ಗಳನ್ನೂ ಒಳಗೊಂಡಂತೆ ಎಲ್ಲ ಕಾರ್ಡ್‍ಗಳ ಅವಧಿಯನ್ನು 10 ವರ್ಷಕ್ಕೆ ವಿಸ್ತರಿಸಲಾಗಿದೆ.
Advertisement
ಕೊರೊನಾದಿಂದ ಐದಾರು ತಿಂಗಳಿಂದ ಸ್ಥಗಿತವಾಗಿದ್ದ ನಮ್ಮ ಮೆಟ್ರೋ ಸೆಪ್ಟೆಂಬರ್ 7 ರಿಂದ ಸಂಚಾರ ಶುರುಮಾಡಿದೆ. ಕೊರೊನಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಕೋವಿಡ್ 19 ಕಾರಣದಿಂದ ಮಾರ್ಚ್ 22 ರಿಂದ ಮೆಟ್ರೋ ಸೇವೆ ರದ್ದುಪಡಿಸಲಾಗಿತ್ತು. ಈಗ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮೆಟ್ರೋ ಸಂಚಾರ ಆರಂಭವಾಗಿದೆ. ಮೆಟ್ರೋ ಶುರುವಾಯಿತು ಎಂದು ಎಲ್ಲರೂ ಒಮ್ಮೆ ನುಗ್ಗುವಂತ್ತಿಲ್ಲ. ಯಾಕಂದರೆ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಲೇಬೇಕಾಗಿದೆ.
Advertisement
ಮೆಟ್ರೋ ಸಂಚಾರಕ್ಕೆ ರೂಲ್ಸ್
* ಆರೋಗ್ಯ ಸೇತು ಆಪ್ ಇದ್ದರೆ ಮಾತ್ರ ಎಂಟ್ರಿ
* ಕ್ಯಾಶ್‍ಲೆಸ್ ಸಂಚಾರಕ್ಕೆ ಮಾತ್ರ ಅವಕಾಶ
* ಮೆಟ್ರೋ ಸ್ಮಾರ್ಟ್ ಕಾರ್ಡ್ ಗೆ ಮಾತ್ರ ಮೆಟ್ರೋಗೆ ಎಂಟ್ರಿ
* ಟೋಕನ್ ಬಳಸಿ ಸಂಚಾರಕ್ಕೆ ಅವಕಾಶ ಇಲ್ಲ
* ಸ್ಯಾನಿಟೈಸರ್ ಬಳಕೆ, ಉಷ್ಣಾಂಶ ಚೆಕ್ ಆದ್ರೆ ಮಾತ್ರ ಎಂಟ್ರಿ
* ಸ್ಟೇಷನ್‍ನಲ್ಲಿ ಪ್ರಯಾಣಿಕರ ನಿಲುಗಡೆಗೆ ಬಾಕ್ಸ್
* ಪ್ರವೇಶ ದ್ವಾರ, ನಿರ್ಗಮನ, ಪ್ಲಾಟ್ ಫಾರ್ಮ್‍ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು
* ಎಸ್ಕೇಲೇಟರ್ ಬಳಸುವ ಪ್ರಯಾಣಿಕರು ಒಂದು ಮೆಟ್ಟಿಲು ಅಂತರ ಕಾಪಾಡಬೇಕು
* ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು
* 50ಕ್ಕೂ ಹೆಚ್ಚು ಪ್ರಯಾಣಿಕರು ನಿಲ್ದಾಣದಲ್ಲಿ ನಿಲ್ಲುವಂತಿಲ್ಲ
* 6 ಬೋಗಿ ರೈಲಿನಲ್ಲಿ 400 ಪ್ರಯಾಣಿಕರಿಗೆ ಮಾತ್ರ ಅವಕಾಶ
* ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಬೇಕು
* ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ನಿಲ್ದಾಣಗಳಲ್ಲಿ ನಿಲ್ಲಿಸಲ್ಲ
* 60 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಇದ್ರೆ ಮಾತ್ರ ಓಡಾಟ