ಚೆನ್ನೈ: ಮೇಕೆದಾಟು ಯೋಜನೆ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ ಈಗ ಇಕ್ಕಟ್ಟಿಗೆ ಸಿಲುಕಿದೆ.
ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸರ್ವ ಪಕ್ಷ ಸಭೆ ಆರಂಭಗೊಂಡಿದ್ದು 12 ಪಕ್ಷಗಳ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.
Advertisement
Advertisement
ಇಂದು ನಡೆಯುತ್ತಿರುವ ಸರ್ವ ಪಕ್ಷ ಸಭೆಯಲ್ಲಿ ತಮಿಳುನಾಡು ಬಿಜೆಪಿ ಈ ಯೋಜನೆಯನ್ನು ವಿರೋಧಿಸಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಪಿ ದೊರೆಸಾಮಿ ಅಣೆಕಟ್ಟು ನಿರ್ಮಾಣ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?
Advertisement
ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿರುವ ಬಿಜೆಪಿ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾಗಿದೆ. ಆದರೆ ಈಗ ತಮಿಳುನಾಡು ಬಿಜೆಪಿ ವಿರೋಧದಿಂದ ಬಿಜೆಪಿ ಈಗ ಇಕ್ಕಟ್ಟಿಗೆ ಸಿಲುಕಿದೆ.
Advertisement
ಮೇಕೆದಾಟು ಯೋಜನೆ ವಿರೋಧಿಸಲು ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ. ಕಳೆದ ವಾರ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಭೇಟಿಯಾಗಿ ಅನುಮತಿ ನೀಡದಂತೆ ಮನವಿ ಮಾಡಿದ್ದರು. ಈಗ ಸರ್ವ ಪಕ್ಷದ ಸಭೆ ಮೂಲಕವೂ ಒತ್ತಡ ಹೇರಲು ಪ್ರಯತ್ನ ನಡೆಸಿದೆ.