ಚೆನೈ: ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ ಬೆನ್ನಲೆ ತಮಿಳುನಾಡು ಸರ್ಕಾರ ಸರ್ಕಾರ ಸಕ್ರಿಯವಾಗಿದ್ದು, ಯೋಜನೆಯನ್ನು ವಿರೋಧಿಸಲು ಹಲವು ತಂತ್ರಗಳನ್ನು ಮಾಡುತ್ತಿದೆ.
Advertisement
ರಾಜ್ಯ ಸರ್ಕಾರದ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಲು ಇಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.
Advertisement
Advertisement
ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ನಿರ್ಣಯವನ್ನು ವಿರೋಧಿಸುವುದು, ಯೋಜನೆಗೆ ತಡೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು, ಇದರ ಜೊತೆಗೆ ಸುಪ್ರೀಂಕೋರ್ಟ್‍ನಲ್ಲಿ ಕಾನೂನು ಹೋರಾಟ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Advertisement
ತಮಿಳುನಾಡು ಸರ್ಕಾರದ ಈ ನಿರ್ಧಾರಕ್ಕೆ ಎಲ್ಲ ಪಕ್ಷಗಳು ಬೆಂಬಲ ಸೂಚಿಸಿದ್ದು, ಮೇಕೆದಾಟು ಅಣೆಕಟ್ಟು ನಿರ್ಮಾಣವಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದ್ದು, ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ಉಳಿದ ಪಕ್ಷಗಳು ನೀಡಿವೆ. ಶೀಘ್ರದಲ್ಲಿ ಸರ್ವ ಪಕ್ಷ ಸದಸ್ಯರ ನಿಯೋಗ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗುವ ಸಾಧ್ಯತೆ ಇದ್ದು, ಯೋಜನೆಗೆ ತಡೆ ಕೋರಿ ಮನವಿ ಮಾಡಲಿದ್ದಾರೆ. ಇದನ್ನೂ ಓದಿ:ಸುಮಲತಾ ಬೇಬಿ ಬೆಟ್ಟಕ್ಕೆ ಬನ್ನಿ ಅಂದ್ರೆ ಬರುತ್ತೇನೆ: ಪುಟ್ಟರಾಜು